Select Your Language

Notifications

webdunia
webdunia
webdunia
webdunia

ಶೇರುಪೇಟೆಗೆ ಶುಭಶುಕ್ರವಾರ, ಭರ್ಜರಿ ವಹಿವಾಟು

ಶೇರುಪೇಟೆಗೆ ಶುಭಶುಕ್ರವಾರ, ಭರ್ಜರಿ ವಹಿವಾಟು
ಮುಂಬೈ , ಶುಕ್ರವಾರ, 30 ಮಾರ್ಚ್ 2012 (17:59 IST)
PTI
ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಸೂಚ್ಯಂಕ 346 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಕಳೆದ ಎರಡು ದಿನಗಳ ವಹಿವಾಟಿನಲ್ಲಿ 200 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 345.59 ಪಾಯಿಂಟ್‌ಗಳ ಚೇತರಿಕೆ ಕಂಡು 17,404.20 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 116.70 ಪಾಯಿಂಟ್‌ಗಳ ಏರಿಕೆ ಕಂಡು 5,295.55 ಅಂಕಗಳಿಗೆ ತಲುಪಿದೆ.

ಸ್ಚೇಟ್ ಬ್ಯಾಂಕ್ ಆಫ್ ಇಂಡಿಯಾ, ಐಸಿಐಸಿಐ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.

Share this Story:

Follow Webdunia kannada