Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: ಪಾತಾಳಕ್ಕೆ ಕುಸಿದ ಸಂವೇದಿ ಸೂಚ್ಯಂಕ

ಸೆನ್ಸೆಕ್ಸ್: ಪಾತಾಳಕ್ಕೆ ಕುಸಿದ ಸಂವೇದಿ ಸೂಚ್ಯಂಕ
ಮುಂಬೈ , ಬುಧವಾರ, 28 ಆಗಸ್ಟ್ 2013 (12:31 IST)
PTI
ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನ ಮಧ್ಯೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ ಕಂಡಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 270 ಪಾಯಿಂಟ್‌ಗಳ ಕುಸಿತ ಕಂಡಿದೆ.

ಬಿಎಸ್‌ಇ ಶೇರುಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 275.83 ಪಾಯಿಂಟ್‌ಗಳ ಕುಸಿತ ಕಂಡು 17,692 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 106.10 ಪಾಯಿಂಟ್‌ಗಳ ಕುಸಿತ ಕಂಡು 5181 ಅಂಕಗಳಿಗೆ ತಲುಪಿದೆ.

ಪಿಎಸ್‌ಯು, ರಿಯಲ್ಟಿ, ಎಫ್‌ಎಂಸಿಜಿ, ವಾಹನೋದ್ಯಮ ಮತ್ತು ಬಂಡವಾಳ ವಸ್ತುಗಳ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.

ಒಎನ್‌ಜಿಸಿ, ಎಚ್‌ಡಿಎಫ್‌ಸಿ, ಮಹೀಂದ್ರಾ ಆಂಡ್ ಮಹೀಂದ್ರಾ, ಗೇಲ್ ಮತ್ತು ಬಾರ್ತಿ ಏರ್‌ಟೆಲ್ ಕಂಪೆನಿಯ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.

Share this Story:

Follow Webdunia kannada