Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: 31 ಪಾಯಿಂಟ್‌ಗಳ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ

ಬಿಎಸ್‌ಇ
ಏಷ್ಯಾ ಮಾರುಕಟ್ಟೆಗಳ ಮಿಶ್ರ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 31 ಪಾಯಿಂಟ್‌ಗಳ ಕುಸಿತ ಕಂಡಿದೆ.  
 
ಮಾಸಾಂತ್ಯದ ಹಿನ್ನೆಲೆಯಲ್ಲಿ ಹೂಡಿಕೆದಾರರು ಬ್ಯಾಂಕಿಂಗ್, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಶೇರುಗಳ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ. 
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 384.82 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 31.38 ಪಾಯಿಂಟ್‌ಗಳ ಕುಸಿತ ಕಂಡು 28,063.95 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 15.20 ಪಾಯಿಂಟ್‌ಗಳ ಕುಸಿತ ಕಂಡು 8,620.45 ಅಂಕಗಳಿಗೆ ತಲುಪಿದೆ.
 
ಲುಪಿನ್, ಎಚ್‌ಡಿಎಫ್‌ಸಿ ಲಿಮಿಟೆಡ್, ಎಕ್ಸಿಸ್ ಬ್ಯಾಂಕ್, ಡಾ.ರೆಡ್ಡಿ ಲ್ಯಾಬ್, ಹೀರೋ ಮೋಟಾರ್ ಕಾರ್ಪೋರೇಶನ್, ಇನ್ಫೋಸಿಸ್, ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಶೇರುಗಳು ಇಂದಿನ ವಹಿವಾಟಿನಲ್ಲಿ ಶೇ.0.78 ರಷ್ಟು ಕುಸಿತ ಕಂಡಿವೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.81 ರಷ್ಟು ಏರಿಕೆ ಕಂಡಿದ್ದರೆ, ಜಪಾನ್‌ನ ನಿಕೈ ಸೂಚ್ಯಂಕ ಶೇ.1.55 ರಷ್ಟು ಇಳಿಕೆ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.40 ರಷ್ಟು ಏರಿಕೆಯಾಗಿದೆ.
 
ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.42 ರಷ್ಟು ಇಳಿಕೆ ಕಂಡಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಾರಿಕೆ ನೌಕರರ ವೇತನ ಹೆಚ್ಚಳ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ