Daily Horoscope
✕

ವಿದೇಶಿ ಬಂಡವಾಳ ಒಳಹರಿವು ಹೆಚ್ಚಳ: ಚೇತರಿಕೆ ಕಂಡ ಶೇರುಪೇಟೆ

Webdunia
ಬುಧವಾರ, 31 ಆಗಸ್ಟ್ 2016 (13:02 IST)
ಶೇರುಪೇಟೆ ಸೂಚ್ಯಂಕ ಸತತ ಮೂರನೇ ದಿನವೂ ಚೇತರಿಕೆ ಕಂಡಿದೆ. ವಿದೇಶಿ ಬಂಡವಾಳ ಹೂಡಿಕೆದಾರರ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇರುಸೂಚ್ಯಂಕ 131 ಪಾಯಿಂಟ್‌ಗಳ ಏರಿಕೆ ಕಂಡಿದೆ. 
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 560.76 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 131.37 ಪಾಯಿಂಟ್‌ಗಳ ಕುಸಿತ ಕಂಡು 28,474.38 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 55.90 ಪಾಯಿಂಟ್‌ಗಳ ಏರಿಕೆ ಕಂಡು 8,800.25 ಅಂಕಗಳಿಗೆ ತಲುಪಿದೆ.
 
ರಿಯಲ್ಟಿ, ಬ್ಯಾಂಕಿಂಗ್ ಮತ್ತು ಹೆಲ್ತ್‌ಕೇರ್ ಕ್ಷೇತ್ರಗಳ ಶೇರುಗಳು ಇಂದಿನ ವಹಿವಾಟಿನಲ್ಲಿ ಶೇ.1.08 ರಷ್ಟು ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಜಪಾನ್‌ನ ನಿಕೈ ಸೂಚ್ಯಂಕ ಕೂಡಾ ಶೇ.0.79 ರಷ್ಟು ಏರಿಕೆ ಕಂಡಿದ್ದರೆ, ಶಾಂಘೈ ಸೂಚ್ಯಂಕ ಶೇ.0.18 ರಷ್ಟು ಏರಿಕೆ ಕಂಡಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಅಲ್ಪ ಚೇತರಿಕೆ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.26 ರಷ್ಟು ಏರಿಕೆ ಕಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಂತಹ ದುರಂತ ನಾಯಕನ ಸಹಸವಾಸ ಮಾಡಿ ಖರ್ಗೆಯವರೂ ಹೀಗಾದ್ರು: ಛಲವಾದಿ ನಾರಾಯಣಸ್ವಾಮಿ

ಅಪ್ಪ, ಮಗ ಇಬ್ರೂ ಸರಿಯಿಲ್ಲ, ಖರ್ಗೆ ಬಾಯಿ ಫಿನಾಯಿಲ್ ಹಾಕಿ ತೊಳೆಯಬೇಕು: ಆರ್ ಅಶೋಕ್ ವಾಗ್ದಾಳಿ

ಹೋಟೆಲ್ ಕಾರಿಡಾರ್ ನಲ್ಲಿ ದೊಪ್ಪನೆ ಬಿದ್ದ ನವವಧು, ಎತ್ತಿ ಹೋದ ಪತಿ: 5 ಸೆಕೆಂಡ್ನ ಶಾಕಿಂಗ್ ಸಿಸಿಟಿವಿ ದೃಶ್ಯ ವೈರಲ್ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ವೈದ್ಯನಂತೆ ನಟಿಸಿ ಚುಚ್ಚುಮದ್ದು ನೀಡಲು ಮುಂದಾದ ವ್ಯಕ್ತಿ: ತಕ್ಷಣವೇ ಓಡಿಹೋದ ನಕಲಿ ವಿಕಲಚೇತನ ಭಿಕ್ಷುಕ Video

ಮುಂದಿನ ಸುದ್ದಿ
Show comments