ಕಾರ್ಪೋರೇಟ್ ಕಂಪೆನಿಗಳ ಚೇತರಿಕೆ ಫಲಿತಾಂಶದ ನಿರೀಕ್ಷೆಗಳಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 127 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಕಳೆದ ಮೂರು ದಿನಗಳ ವಹಿವಾಟಿನಲ್ಲಿ 688.28 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 126.93 ಪಾಯಿಂಟ್‌ಗಳ ಏರಿಕೆ ಕಂಡು 27,942.11 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 45.50 ಪಾಯಿಂಟ್‌ಗಳ ಕುಸಿತ ಕಂಡು 8,565 ಅಂಕಗಳಿಗೆ ತಲುಪಿದೆ.
ಎಸ್‌ಬಿಐ, ಪವರ್ ಗ್ರಿಡ್, ಗೇಲ್ ಮತ್ತು ಟಾಟಾ ಮೋಟಾರ್ಸ್, ಬ್ಯಾಂಕಿಂಗ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ. ಸ್ಮಾಲ್ ಕ್ಯಾಪ್ ಶೇ.0.73 ರಷ್ಟು ಚೇತರಿಕೆ ಕಂಡಿದ್ದರೆ, ಮಿಡ್ ಕ್ಯಾಪ್ ಶೇ.0.54 ರಷ್ಟು ಏರಿಕೆ ಕಂಡಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.