Select Your Language

Notifications

webdunia
webdunia
webdunia
webdunia

ಜಿಎಸ್‌ಟಿ ಮಸೂದೆ ಅಂಗೀಕಾರ ನಿರೀಕ್ಷೆ: ಸಂವೇದಿ ಸೂಚ್ಯಂಕ ಚೇತರಿಕೆ

ಜಿಎಸ್‌ಟಿ ಮಸೂದೆ ಅಂಗೀಕಾರ ನಿರೀಕ್ಷೆ: ಸಂವೇದಿ ಸೂಚ್ಯಂಕ ಚೇತರಿಕೆ
ಮುಂಬೈ , ಬುಧವಾರ, 27 ಜುಲೈ 2016 (12:12 IST)
ಮುಂಗಾರು ಅಧಿವೇಶನದಲ್ಲಿ ಜಿಎಸ್‌ಟಿ ಮಸೂದೆ ಅಂಗೀಕಾರವಾಗುವ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 144 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
 
ವಿದೇಶಿ ಬಂಡವಾಳದ ಒಳಹರಿವು ಮತ್ತು ಏಷ್ಯಾ ಮಾರುಕಟ್ಟೆಗಳ ಮಿಶ್ರ ಫಲಿತಾಂಶದ ವಹಿವಾಟಿನಿಂದಾಗಿ ಶೇರುಪೇಟೆ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 118.82 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 143.87 ಪಾಯಿಂಟ್‌ಗಳ ಏರಿಕೆ ಕಂಡು 28,120.39 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 56.05 ಪಾಯಿಂಟ್‌ಗಳ ಏರಿಕೆ ಕಂಡು 8,646.70 ಅಂಕಗಳಿಗೆ ತಲುಪಿದೆ.
 
ಮಾರುತಿ ಸುಜುಕಿ ಇಂಡಿಯಾ, ಐಸಿಐಸಿಐ ಬ್ಯಾಂಕ್, ಟಾಟಾ ಮೋಟಾರ್ಸ್, ಎಚ್‌ಡಿಎಫ್‌ಸಿ ಲಿಮಿಟೆಡ್, ಗೇಲ್, ಎಸ್‌ಬಿಐ, ಒಎನ್‌ಜಿಸಿ, ಎನ್‌ಟಿಪಿಸಿ, ಟಿಸಿಎಸ್, ಭಾರ್ತಿ ಏರ್‌ಟೆಲ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ಜಪಾನ್‌ನ ನಿಕೈ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.2.32 ರಷ್ಟು ಏರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.16 ಪಾಯಿಂಟ್‌ಗಳ ಕುಸಿತ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.1.62 ರಷ್ಟು ಕುಸಿತ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.10 ಪಾಯಿಂಟ್‌ಗಳ ಇಳಿಕೆ ಕಂಡಿದೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಪುತ್ರ ರಾಕೇಶ್ ಅವರಿಗೆ ಅನಾರೋಗ್ಯ: ಬೆಲ್ಜಿಯಂಗೆ ವೈದ್ಯರ ತಂಡ