Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: ಐದನೇ ದಿನವೂ ಭರ್ಜರಿ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

ಸೆನ್ಸೆಕ್ಸ್: ಐದನೇ ದಿನವೂ ಭರ್ಜರಿ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ
ಮುಂಬೈ , ಶುಕ್ರವಾರ, 1 ಜುಲೈ 2016 (12:48 IST)
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗಲಿದೆ ಎನ್ನುವ ನಿರೀಕ್ಷೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 220 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
 
ಕಳೆದ ನಾಲ್ಕು ದಿನಗಳ ವಹಿವಾಟಿನಲ್ಲಿ 602.01 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 220.29 ಪಾಯಿಂಟ್‌ಗಳ ಏರಿಕೆ ಕಂಡು 27,220.01 ಅಂಕಗಳಿಗೆ ತಲುಪಿದೆ. 
 
ಗೃಹೋಪಕರಣ ವಸ್ತುಗಳು, ಹೆಲ್ತ್‌ಕೇರ್ ಮತ್ತು ಉಕ್ಕು ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 58.60 ಪಾಯಿಂಟ್‌ಗಳ ಏರಿಕೆಯಾಗಿ 8,346.35 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.67 ರಷ್ಟು ಏರಿಕೆಯಾಗಿದ್ದರೆ, ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.24 ರಷ್ಟು ಚೇತರಿಕೆ ಕಂಡಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆಗೆ ರಜೆ ಘೋಷಿಸಲಾಗಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.1.33 ರಷ್ಟು ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

18 ವರ್ಷಗಳ ವರೆಗೆ ಭ್ರೂಣ ಶೇಖರಿಸಿ ಆರೋಗ್ಯಕರ ಮಗು ಪಡೆದ ಚೀನಾ ಮಹಿಳೆ