Daily Horoscope

Select Your Language

Notifications

webdunia
webdunia
webdunia
webdunia

ಜಿಎಸ್‌ಟಿ ಅಂಗೀಕಾರ ನಿರೀಕ್ಷೆ: ಭರ್ಜರಿ ಚೇತರಿಕೆ ಕಂಡ ಶೇರುಸಂವೇದಿ ಸೂಚ್ಯಂಕ

ಜಿಎಸ್‌ಟಿ
ಜಿಎಸ್‌ಟಿ ಮಸೂದೆ ಅಂಗೀಕಾರವಾಗುವ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಹೂಡಿಕೆದಾರರು, ಚಿಲ್ಲರೆ ವಹಿವಾಟುದಾರರು ಶೇರುಗಳ ಖರೀದಿಗೆ ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 220 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 156.76 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 220.09 ಪಾಯಿಂಟ್‌ಗಳ ಏರಿಕೆ ಕಂಡು 28,271.95 ಅಂಕಗಳಿಗೆ ತಲುಪಿದೆ.  
 
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 69.15 ಪಾಯಿಂಟ್‌ಗಳ ಚೇತರಿಕೆ ಕಂಡು 8,707.65 ಅಂಕಗಳಿಗೆ ತಲುಪಿದೆ.
 
ಜಿಎಸ್‌ಟಿ ಮಸೂದೆ ಅಂಗೀಕಾರವಾಗುವ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಹೂಡಿಕೆದಾರರು, ಚಿಲ್ಲರೆ ವಹಿವಾಟುದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.29 ರಷ್ಟು ಏರಿಕೆ ಕಂಡಿದ್ದರೆ. ಜಪಾನ್‌ನ ನಿಕೈ ಶೇ.0.49 ರಷ್ಟು ಚೇತರಿಕೆಯಾಗಿದೆ. ಆದರೆ, ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.1.30 ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಕೇಶ್ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮರಿಗೌಡ ಕೋರ್ಟ್‌ಗೆ ಮನವಿ