Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: ಪಾತಾಳಕ್ಕೆ ಕುಸಿದ ಶೇರುಪೇಟೆ ಸಂವೇದಿ ಸೂಚ್ಯಂಕ

ಸೆನ್ಸೆಕ್ಸ್
ಜಿಎಸ್‌ಟಿ ಮಸೂದೆ ಅಂಗೀಕಾರವಾಗುವುದೋ ಇಲ್ಲವೋ ಎನ್ನುವ ಆತಂಕದಿಂದಾಗಿ ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 284 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 8600 ಅಂಶಗಳ ಮಾನಸಿಕ ಗಡಿಯಿಂದ ಕೂಡಾ ಕೆಳಗೆ ಕುಸಿಯಿತು.
 
ಕಳೆದ ಮೂರು ದಿನಗಳ ವಹಿವಾಟಿನಲ್ಲಿ 226.89 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ  284.20 ಪಾಯಿಂಟ್‌ಗಳ ಕುಸಿತ ಕಂಡು 27,697.51 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 78.05 ಪಾಯಿಂಟ್‌ಗಳ ಕುಸಿತ ಕಂಡು 8,544.85 ಅಂಕಗಳಿಗೆ ತಲುಪಿದೆ.
 
ಟಾಟಾ ಮೋಟಾರ್ಸ್, ಐಟಿಸಿ ಲಿಮಿಟೆಡ್, ಮಾರುತಿ ಸುಜುಕಿ, ವಿದ್ಯುತ್ ಗ್ರಿಡ್, ಎಲ್‌ಆಂಡ್‌ಟಿ, ರಿಲಯನ್ಸ್ ಇಂಡಸ್ಟ್ರೀಸ್, ಹಿಂದೂಸ್ತಾನ್ ಯುನಿಲಿವರ್, ಲುಪಿನ್, ಬಜಾಜ್ ಅಟೋ, ಐಸಿಐಸಿಐ ಬ್ಯಾಂಕ್, ಟಿಸಿಎಸ್ ಶೇರುಗಳು ವಹಿವಾಟಿನಲ್ಲಿ ನಷ್ಟ ಅನುಭವಿಸಿವೆ.
 
ಏತನ್ಮಧ್ಯೆ, ಸಿಪ್ಲಾ, ಏಷ್ಯನ್ ಪೇಂಟ್ಸ್, ಸನ್‌ ಫಾರ್ಮಾ ಮತ್ತು ಕೋಲ್ ಇಂಡಿಯಾ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ಜಪಾನ್‌, ಹಾಂಗ್‌ಕಾಂಗ್‌ ಮತ್ತು ಸಿಂಗಾಪೂರ್ ಶೇರುಪೇಟೆಗಳು ವಹಿವಾಟಿನ ಮುಕ್ತಾಯಕ್ಕೆ ಶೇ.1.88 ರಷ್ಟು ಕುಸಿತ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರ ಶ್ರೀ ಗೋಸಂದೇಶ