Select Your Language

Notifications

webdunia
webdunia
webdunia
webdunia

ಟಿಸಿಎಸ್ ಕುಸಿತ: 65 ಪಾಯಿಂಟ್‌ಗಳ ಇಳಿಕೆ ಕಂಡ ಸಂವೇದಿ ಸೂಚ್ಯಂಕ

ಟಿಸಿಎಸ್ ಕುಸಿತ: 65 ಪಾಯಿಂಟ್‌ಗಳ ಇಳಿಕೆ ಕಂಡ ಸಂವೇದಿ ಸೂಚ್ಯಂಕ
ಮುಂಬೈ , ಶುಕ್ರವಾರ, 17 ಏಪ್ರಿಲ್ 2015 (14:45 IST)
ಟಾಟಾ ಕನ್ಸಲ್‌ಟನ್ಸಿ ಸರ್ವಿಸಸ್ ಕಂಪೆನಿಯ ತ್ರೈಮಾಸಿಕ ಫಲಿತಾಂಶದಲ್ಲಿ ಶೇ.27 ರಷ್ಟು ಕುಸಿತವಾಗಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 65 ಪಾಯಿಂಟ್‌ಗಳ ಕುಸಿತ ಕಂಡಿದೆ.

ಏಷ್ಯಾ ಮಾರುಕಟ್ಟೆಗಳ ಮಿಶ್ರವಹಿವಾಟು ಮತ್ತು ಐಟಿ ಕಂಪೆನಿಗಳ ಶೇರುಗಳ ಮಾರಾಟದಿಂದಾಗಿ ಶೇರುಪೇಟೆಯ ಸೂಚ್ಯಂಕ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಕಳೆದ ಎರಡು ದಿನಗಳ ವಹಿವಾಟಿನಲ್ಲಿ 378.40 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ,ಮತ್ತೆ ಇಂದಿನ ಆರಂಭಿಕ ವಹಿವಾಟಿನಲ್ಲಿ 64.73 ಪಾಯಿಂಟ್‌ಗಳ ಇಳಿಕೆ ಕಂಡು 28,601.31 ಅಂಕಗಳಿಗೆ ತಲುಪಿದೆ.

ಐಟಿ ತಂತ್ರಜ್ಞಾನ, ಗೃಹೋಪಕರಣ ವಸ್ತುಗಳು ಬ್ಯಾಂಕಿಂಗ್ ಹಾಗೂ ಹೆಲ್ತ್‌ಕೇರ್ ಕ್ಷೇತ್ರದ ಶೇರುಗಳ ಮಾರಾಟದಲ್ಲಿ ಇಳಿಕೆಯಾಗಿದ್ದರಿಂದ
ಶೇರುಪೇಟೆ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಸಾಫ್ಟ್‌ವೇರ್ ಕ್ಷೇತ್ರದ ಕಂಪೆನಿಗಳಾದ ವಿಪ್ರೋ, ಇನ್ಫೋಸಿಸ್ ಶೇರುಗಳ ವಹಿವಾಟಿನಲ್ಲಿ ಭಾರಿ ಕುಸಿತ ಕಂಡುಬಂದಿದೆ. ಆದರೆ, ರಿಲಯನ್ಸ್ ಇಂಡಸ್ಟ್ರೀಸ್ ಶೇರುಗಳ ವಹಿವಾಟಿನಲ್ಲಿ ಚೇತರಿಕೆಯಾಗಿದೆ.

ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಶೇ.1.59 ರಷ್ಟು ಇಳಿಕೆಯಾಗಿದೆ. ಆದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.35 ರಷ್ಟು ಏರಿಕೆಯಾಗಿದೆ.

Share this Story:

Follow Webdunia kannada