ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 80 ಪಾಯಿಂಟ್‌ಗಳ ಕುಸಿತ ಕಂಡಿದೆ.
ಐಟಿ, ತಂತ್ರಜ್ಞಾನ, ವಾಹನೋದ್ಯಮ, ಬ್ಯಾಂಕಿಂಗ್, ಹೆಲ್ತ್‌ಕೇರ್ ಮತ್ತು ಎಫ್‌ಎಂಸಿಜಿ ಶೇರುಗಳ ಖರೀದಿಗೆ ಹೂಡಿಕೆದಾರರು ನಿರಾಸಕ್ತಿ ತೋರಿದ್ದರಿಂದ ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 80.38 ಪಾಯಿಂಟ್‌ಗಳ ಕುಸಿತ ಕಂಡು 26,683.08 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 23.25 ಪಾಯಿಂಟ್‌ಗಳ ಕುಸಿತ ಕಂಡು 8,180.25 ಅಂಕಗಳಿಗೆ ತಲುಪಿದೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.75 ರಷ್ಟು ಕುಸಿತ ಕಂಡಿದ್ದರೆ, ಜಪಾನ್‌ನ ನಿಕೈ ಸೂಚ್ಯಂಕ ಶೇ.0.49 ರಷ್ಟು ಇಳಿಕೆ ಕಂಡಿದೆ. ಚೀನಾ ಮಾರುಕಟ್ಟೆಗೆ ಇಂದು ರಜೆ ಘೋಷಿಸಲಾಗಿದೆ.
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.11 ರಷ್ಟು ಕುಸಿತ ಕಂಡಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ