Select Your Language

Notifications

webdunia
webdunia
webdunia
webdunia

ಪಿಎಸ್‌ಯು ಬ್ಯಾಂಕ್‌ಗಳಿಗೆ ಸರಕಾರ ನೆರವು: ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

ಸೆನ್ಸೆಕ್ಸ್
ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 41 ಪಾಯಿಂಟ್‌ಗಳ ಚೇತರಿಕೆಯೊಂದಿಗೆ ಮುಕ್ತಾಯವಾಗಿದೆ.
 
ಕೇಂದ್ರ ಸರಕಾರ 22,915 ಕೋಟಿ ರೂಪಾಯಿಗಳನ್ನು 13 ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ವಿತರಿಸುವ ನಿರ್ಧಾರದಿಂದ ಹೂಡಿಕೆದಾರರು ಶೇರುಗಳ ಖರೀದಿಗೆ ಮುಂದಾಗಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಜಿಎಸ್‌ಟಿ ಮಸೂದೆ ಅಂಗೀಕಾರವಾಗುವ ನಿರೀಕ್ಷೆ ಮತ್ತು ದೇಶಾದ್ಯಂತ ಉತ್ತಮ ಮುಂಗಾರು ಮಳೆಯ ಹಿನ್ನೆಲೆ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಸಾರ್ವಜನಿಕ ಸ್ವಾಮ್ಯದ ಕೆನರಾ ಬ್ಯಾಂಕ್, ಎಸ್‌ಬಿಐ ಮತ್ತು ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಎಚ್‌ಪಿಸಿಎಲ್, ಐಒಸಿ ಮತ್ತು ಬಿಪಿಸಿಎಲ್ ಶೇರುಗಳು ವಹಿವಾಟಿನಲ್ಲಿ ಶೇ 4.71 ರಷ್ಟು ಚೇತರಿಕೆ ಕಂಡಿವೆ. 
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 40.96 ಪಾಯಿಂಟ್‌ಗಳ ಏರಿಕೆ ಕಂಡು 27,637.98 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 19.85 ಪಾಯಿಂಟ್‌ಗಳ ಏರಿಕೆ ಕಂಡು 8,528.55 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌, ಜಪಾನ್, ದಕ್ಷಿಣ ಕೊರಿಯಾ ಮತ್ತು ಸಿಂಗಾಪೂರ್ ಶೇರುಪೇಟೆ ವಹಿವಾಟಿನ ಮುಕ್ತಾಯಕ್ಕೆ ಶೇ.0.21 ರಷ್ಟು ಕುಸಿತ ಕಂಡಿದ್ದರೆ, ಚೀನಾ, ತೈವಾನ್ ಶೇರುಗಳು ಶೇ.1.37 ರಷ್ಟು ಚೇತರಿಕೆ ಕಂಡಿವೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಜಾರ್ಜ್, ಮೊಹಾಂತಿ, ಪ್ರಸಾದ್ ವಿರುದ್ಧ ಮಡಿಕೇರಿ ಠಾಣೆಯಲ್ಲಿ ಎಫ್ಐಆರ್ ದಾಖಲು