ಏಷ್ಯಾ ಮಾರುಕಟ್ಟೆಗಳ ಮಿಶ್ರ ವಹಿವಾಟಿನ ಮಧ್ಯೆಯೂ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 58 ಪಾಯಿಂಟ್ಗಳ ಏರಿಕೆ ಕಂಡು 24,396.99 ಅಂಕಗಳಿಗೆ ತಲುಪಿದೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 115,11 ಪಾಯಿಂಟ್ಗಳ ಏರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 24,396.99 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 23.30 ಪಾಯಿಂಟ್ಗಳ ಏರಿಕೆ ಕಂಡು 7,427.30 ಅಂಕಗಳಿಗೆ ತಲುಪಿದೆ.
ಹಾಂಗ್ಕಾಂಗ್ನ ಹಾಂಗ್ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.54 ರಷ್ಟು ಏರಿಕೆ ಕಂಡಿದೆ. ಜಪಾನ್ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.1.49 ರಷ್ಟು ಚೇತರಿಕೆ ಕಂಡಿದೆ.
ಅಮೆರಿಕದ ಶೇರುಪೇಟೆ ಸೂಚ್ಯಂಕ ಕೂಡಾ ನಿನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.49 ರಷ್ಟು ಏರಿಕೆ ಕಂಡಿದೆ