Webdunia - Bharat's app for daily news and videos

Install App

ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದ ಸೂಚ್ಯಂಕ ಕುಸಿತ

Webdunia
ಬುಧವಾರ, 19 ಆಗಸ್ಟ್ 2015 (14:59 IST)
ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 100 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ವಿದೇಶಿ ಬಂಡವಾಳ ಹೂಡಿಕೆ ಹರಿವು ಕೊರತೆ ಮತ್ತು ಹೂಡಿಕೆದಾರರು ಶೇರುಗಳ ಮಾರಾಟಕ್ಕೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಇಳಿಕೆ ಕಂಡಿದೆ.
 
ಕಳೆದ ಎರಡು ದಿನಗಳ ವಹಿವಾಟಿನಲ್ಲಿ 235.77 ಪಾಯಿಂಟ್‌ಗಳ ಇಳಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದು ಮತ್ತೆ 110.29 ಪಾಯಿಂಟ್‌ಗಳ ಕುಸಿತ ಕಂಡು 27,721.25 ಅಂಕಗಳಿಗೆ ತಲುಪಿದೆ.
 
ಉಕ್ಕು, ಎಫ್‌ಎಂಸಿಜಿ, ವಾಹನೋದ್ಯಮ, ವಿದ್ಯುತ್, ಬಂಡವಾಳ ವಸ್ತುಗಳು ಮತ್ತು ಬ್ಯಾಂಕಿಂಗ್ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 40.60 ಪಾಯಿಂಟ್‌ಗಳ ಇಳಿಕೆ ಕಂಡು 8,425.95 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಶೇರುಪೇಟೆ ಶೇ.0.52ರಷ್ಟು ಇಳಿಕೆ ಕಂಡಿದ್ದರೆ ಹಾಂಗ್‌ಕಾಂಗ್‌ನ ಹಾಂಗ್ಸೆಂಗ್ ಸೂಚ್ಯಂಕ ಕೂಡಾ ಶೇ.1.11 ರಷ್ಟು ಇಳಿಕೆ ಕಂಡಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments