Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸಂವೇದಿ ಸೂಚ್ಯಂಕ

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸಂವೇದಿ ಸೂಚ್ಯಂಕ
ಮುಂಬೈ , ಬುಧವಾರ, 8 ಜೂನ್ 2016 (12:28 IST)
ಕೈಗಾರಿಕೆ ಉತ್ಪಾದನೆ ಸೂಚ್ಯಂಕ ಚೇತರಿಕೆ ಕಾಣುವ ನಿರೀಕ್ಷೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 96 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 232.22 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 95.74 ಪಾಯಿಂಟ್‌ಗಳ ಕುಸಿತ ಕಂಡು 27,105.41 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 22.45 ಪಾಯಿಂಟ್‌ಗಳ ಏರಿಕೆ ಕಂಡು 8,288.90 ಅಂಕಗಳಿಗೆ ತಲುಪಿದೆ.
 
ಓಎನ್‌ಜಿಸಿ, ಎಲ್‌‍ಆಂಡ್‌ಟಿ, ಟಾಟಾ ಮೋಟಾರ್ಸ್, ಸನ್‌ಫಾರ್ಮಾ, ಬಿಎಚ್‌ಇಎಲ್, ಮಹೀಂದ್ರಾ ಆಂಡ್ ಮಹೀಂದ್ರಾ, ಐಟಿಸಿ, ಎನ್‌ಟಿಪಿಸಿ, ಸಿಪ್ಲಾ, ಲುಪಿನ್ ಶೇರುಗಳು ವಹಿವಾಟಿನಲ್ಲಿ ಶೇ,1.60 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ವಿದೇಶಿ ಬಂಡವಾಳದ ಒಳಹರಿವು, ಉತ್ತಮ ಮುಂಗಾರು ಮಳೆ ಹಾಗೂ ಕೈಗಾರಿಕೆ ಉತ್ಪಾದನೆ ಸೂಚ್ಯಂಕ ಚೇತರಿಕೆ ನಿರೀಕ್ಷೆಗಳಿಂದಾಗಿ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.33 ರಷ್ಟು ಚೇತರಿಕೆ ಕಂಡಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.27 ರಷ್ಟು ಏರಿಕೆ ಕಂಡಿದೆ. ಶಾಂಘೈ ಶೇರುಪೇಟೆ ಶೇ.0.71 ರಷ್ಟು ಕುಸಿತ ಕಂಡಿದೆ
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.10 ಪಾಯಿಂಟ್‌ಗಳ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸರಕಾರದ ವಿರುದ್ಧ ಸಮರ ಸಾರಿದರೆ ಕಾನೂನು ಕ್ರಮ: ಶೆಣೈಗೆ ಸಿಎಂ ವಾರ್ನಿಂಗ್