ಅಮೆರಿಕದ ರಿಸರ್ವ್ ಬ್ಯಾಂಕ್ ರೆಪೋ ದರಗಳಲ್ಲಿ ಹೆಚ್ಚಳಗೊಳಿಸುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 71 ಪಾಯಿಂಟ್‌ಗಳ ಕುಸಿತ ಕಂಡಿದೆ.
ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 478 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 71.54 ಪಾಯಿಂಟ್‌ಗಳ ಇಳಿಕೆ ಕಂಡು 25,230.36 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 18.65 ಪಾಯಿಂಟ್‌ಗಳ ಕುಸಿತ ಕಂಡು 7,731.05 ಅಂಕಗಳಿಗೆ ತಲುಪಿದೆ.
ಟಾಟಾ ಸ್ಟೀಲ್, ಲೂಪಿನ್, ಒಎನ್‌ಜಿಸಿ, ಸಿಪ್ಲಾ, ಬಜಾಜ್ ಅಟೋ, ಎಚ್‌ಡಿಎಫ್‌ಸಿ ಮತ್ತು ಟಿಸಿಎಸ್ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.
ಆದಾಗ್ಯೂ, ಆದಾನಿ ಪೋರ್ಟ್ಸ್, ಭಾರ್ತಿ ಏರ್‌ಟೆಲ್, ಹಿಂದೂಸ್ತಾನ್ ಯುನಿಲಿವರ್, ಕೋಲ್ ಇಂಡಿಯಾ ಮತ್ತು ಐಸಿಐಸಿಐ ಬ್ಯಾಂಕ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.