Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: ಭರ್ಜರಿ ಚೇತರಿಕೆ ಕಂಡ ಶೇರುಸೂಚ್ಯಕ

ಸೆನ್ಸೆಕ್ಸ್: ಭರ್ಜರಿ ಚೇತರಿಕೆ ಕಂಡ ಶೇರುಸೂಚ್ಯಕ
ಮುಂಬೈ , ಗುರುವಾರ, 30 ಜುಲೈ 2015 (14:37 IST)
ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಮಾಸಾಂತ್ಯದ ಮಧ್ಯೆಯೂ 156 ಪಾಯಿಂಟ್‌ಗಳ ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 104.20 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 156.72 ಪಾಯಿಂಟ್‌ಗಳ ಏರಿಕೆ ಕಂಡು 27,720.15 ಅಂಕಗಳಿಗೆ ತಲುಪಿದೆ. 
 
ಜಾಗತಿಕ ಮಾರುಕಟ್ಟೆಗಳಲ್ಲಿ ಶೇರುಪೇಟೆಗಳ ಚೇತರಿಕೆಯ ವಹಿವಾಟು ಮತ್ತು ಬಂಡವಾಳ ವಸ್ತುಗಳು, ಹೆಲ್ತ್‌ಕೇರ್, ರಿಯಲ್ಟಿ, ವಾಹನೋದ್ಯಮ, ಪಿಎಸ್‌ಯು ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಏರಿಕೆಯಾಗಿದ್ದರಿಂದ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 46.60 ಪಾಯಿಂಟ್‌ಗಳ ಏರಿಕೆ ಕಂಡು 8,421.65 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.22 ರಷ್ಟು ಏರಿಕೆಯಾಗಿದೆ. ಜಪಾನ್‌ನ ನಿಕೈ ಸೂಚ್ಯಂಕ ಶೇ.1.36 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 

Share this Story:

Follow Webdunia kannada