Webdunia - Bharat's app for daily news and videos

Install App

ಸೆನ್ಸೆಕ್ಸ್: 26 ಸಾವಿರ ಅಂಕಗಳ ಗಡಿ ದಾಟಿದ ಶೇರುಸಂವೇದಿ ಸೂಚ್ಯಂಕ

Webdunia
ಶುಕ್ರವಾರ, 27 ನವೆಂಬರ್ 2015 (13:45 IST)
ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 64 ಪಾಯಿಂಟ್‌ಗಳ ಏರಿಕೆ ಕಂಡಿದೆ. 
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 182.89 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 64.11 ಪಾಯಿಂಟ್‌ಗಳ ಏರಿಕೆ ಕಂಡು 26,022.74 ಅಂಕಗಳಿಗೆ ತಲುಪಿದೆ.
 
ರಿಯಲ್ಟಿ, ಬಂಡವಾಳ ವಸ್ತುಗಳು, ವಾಹನೋದ್ಯಮ, ಬ್ಯಾಂಕಿಂಗ್ ಮತ್ತು ಉಕ್ಕು ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಶೇ.0.64 ರಷ್ಟು ಲಾಭದತ್ತ ಸಾಗಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 26.80 ಪಾಯಿಂಟ್‌ಗಳ ಏರಿಕೆ ಕಂಡು 7,910.60 ಅಂಕಗಳಿಗೆ ತಲುಪಿದೆ. 
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.25 ರಷ್ಟು ಕುಸಿತ ಕಂಡಿದ್ದರೆ, ಶಾಂಘೈ ಶೇರುಪೇಟೆ ಶೇ.1.17 ರಷ್ಟು ಇಳಿಕೆಯಾಗಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.05 ರಷ್ಟು ಕುಸಿದಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments