ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 109 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 8800 ಅಂಶಗಳ ಗಡಿ ದಾಟಿದೆ.
ವಾರದ ಅವಧಿಯಲ್ಲಿ ಶೇರುಪೇಟೆ ಸೂಚ್ಯಂಕ 749.86 ಪಾಯಿಂಟ್‌ಗಳ ಕುಸಿತ ಕಂಡಿದ್ದರೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ 237.10 ಪಾಯಿಂಟ್‌ಗಳಷ್ಟು ಚೇತರಿಕೆ ಕಂಡಿದೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 28.69 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 108.63 ಪಾಯಿಂಟ್‌ಗಳ ಕುಸಿತ ಕಂಡು 28,581.58 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ 35 ಪಾಯಿಂಟ್‌ಗಳ ಚೇತರಿಕೆ ಕಂಡು 8,809.65 ಅಂಕಗಳ ಗಡಿ ದಾಟಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ