Publish Date: Fri, 16 May 2014 (10:42 IST)
Updated Date: Fri, 16 May 2014 (14:52 IST)
ಲೋಕಸಭೆ ಚುನಾವಣೆ ಫಲಿತಾಂಶ ಎನ್‌ಡಿಎ ಪರವಾಗಿದ್ದಂತೆ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ
ವಹಿವಾಟಿನಲ್ಲಿ ಭರ್ಜರಿ ಚೇತರಿಕೆ ಕಂಡಿದೆ.
ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.67 ರಷ್ಟು ಚೇತರಿಕೆ ಕಂಡು 23 ಸಾವಿರ ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಭಾರಿ ಚೇತರಿಕೆ ಕಂಡಿದೆ ಎಂದು
ಮಾರುಕಟ್ಟೆಯ ಮೂಲಗಳು ತಿಳಿಸಿವೆ.