Webdunia - Bharat's app for daily news and videos

Install App

ಸೆನ್ಸೆಕ್ಸ್: ಎರಡು ತಿಂಗಳ ಗರಿಷ್ಠ ಏರಿಕೆ ಕಂಡ ಸಂವೇದಿ ಸೂಚ್ಯಂಕ

Webdunia
ಮಂಗಳವಾರ, 26 ಏಪ್ರಿಲ್ 2016 (18:56 IST)
ಜಾಗತಿಕ ಮಾರುಕಟ್ಟೆಗಳ ಸ್ಥಿರವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಎರಡು ತಿಂಗಳ ಗರಿಷ್ಠ 234.75 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ತೈಲ ಮತ್ತು ಅನಿಲ, ಐಟಿ, ತಂತ್ರಜ್ಞಾನ, ಬಂಡವಾಳ ವಸ್ತುಗಳು, ಎಫ್‌ಎಂಸಿಜಿ ಮತ್ತು ಉಕ್ಕು ಶೇರುಗಳು ವಹಿವಾಟಿನಲ್ಲಿ ಭಾರಿ ಚೇತರಿಕೆ ಕಂಡಿದ್ದರೆ, ಹೆಲ್ತ್‌ಕೇರ್, ಗೃಹೋಪಕರಣ ವಸ್ತುಗಳ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.
 
ಕಳೆದ ಮೂರು ವಾರಗಳ ವಹಿವಾಟಿನಲ್ಲಿ 199844 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ ಮತ್ತೆ 234.75 ಪಾಯಿಂಟ್‌ಗಳ ಏರಿಕೆ ಕಂಡು 24,801.70 ಅಂಕಗಳಿಗೆ ತಲುಪಿದೆ.  
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 94.15 ಪಾಯಿಂಟ್‌ಗಳ ಚೇತರಿಕೆ ಕಂಡು  7,604.35 ಅಂಕಗಳಿಗೆ ತಲುಪಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments