Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ
ನವದೆಹಲಿ , ಸೋಮವಾರ, 30 ಮೇ 2016 (18:11 IST)
ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 72 ಪಾಯಿಂಟ್‌ಗಳ ಅಲ್ಪ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಟಾಟಾ ಮೋಟಾರ್ಸ್, ಕೋಲ್ ಇಂಡಿಯಾ, ಎನ್‌ಟಿಪಿಸಿ, ಹಿರೋ ಮೋಟಾರ್ ಕಾರ್ಪೋರೇಶನ್ ಮತ್ತು ಟಿಸಿಎಸ್ ಕಂಪೆನಿಗಳ ಶೇರು ಖರೀದಿಗೆ ಹೂಡಿಕೆದಾರರು ಹೆಚ್ಚಿನ ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಅಂತ್ಯಕ್ಕೆ 72 ಪಾಯಿಂಟ್‌ಗಳ ಏರಿಕೆ ಕಂಡು 26725.60 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 21.85 ಪಾಯಿಂಟ್‌ಗಳ ಏರಿಕೆ ಕಂಡು 8178.50 ಅಂಕಗಳಿಗೆ ತಲುಪಿದೆ.  

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ರೋಗ ಗುಣಪಡಿಸುವುದಾಗಿ ನಂಬಿಸಿ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ತಾಂತ್ರಿಕ