ಭರ್ಜರಿ ಚೇತರಿಕೆ ಕಂಡ ಶೇರುಪೇಟೆ ಸಂವೇದಿ ಸೂಚ್ಯಂಕ

Webdunia
ಬುಧವಾರ, 31 ಆಗಸ್ಟ್ 2016 (20:29 IST)
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 109 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 41.85 ಪಾಯಿಂಟ್‌ಗಳ ಏರಿಕೆ ಕಂಡು 8,819.20 ಅಂಕಗಳಿಗೆ ತಲುಪಿದೆ.
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 560.76 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ ಮತ್ತೆ 109.16 ಪಾಯಿಂಟ್‌ಗಳ ಏರಿಕೆ ಕಂಡು 28,452.17 ಅಂಕಗಳಿಗೆ ತಲುಪಿದೆ.  
 
ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಎಕ್ಸಿಸ್ ಬ್ಯಾಂಕ್ ಮತ್ತು ಎಸ್‌ಬಿಐ ಶೇರುಗಳು ವಹಿವಾಟಿನ ಮುಕ್ತಾಯಕ್ಕೆ ಶೇ,1.83 ರಷ್ಟು ಏರಿಕೆ ಕಂಡಿದೆ.
 
ಶೇರುಪೇಟೆಯ ವಹಿವಾಟಿನ ಮುಕ್ತಾಯಕ್ಕೆ ಎಲ್‌‍ಆಂಡ್‌ಟಿ, ಏಷ್ಯನ್ ಪೇಂಟ್, ಐಟಿಸಿ ಲಿಮಿಟೆಡ್, ಎಚ್‌ಡಿಎಫ್‌ಸಿ ಲಿಮಿಟೆಡ್, ಪವರ್ ಗ್ರಿಡ್ ಮತ್ತು ವಿಪ್ರೋ ಶೇರುಗಳು ವಹಿವಾಟಿನಲ್ಲಿ ಭರ್ಜರಿ ಚೇತರಿಕೆ ಕಂಡಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments