Publish Date: Mon, 17 Oct 2016 (14:03 IST)
Updated Date: Mon, 17 Oct 2016 (14:05 IST)
ಜಾಗತಿಕ ಮಾರುಕಟ್ಟೆಗಳ ಮಿಶ್ರವಹಿವಾಟಿನ ಮಧ್ಯೆಯೂ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 130 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 30.49 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಪಿಎಸ್‌ಯು, ಬ್ಯಾಂಕಿಂಗ್, ವಿದ್ಯುತ್, ಐಟಿ, ರಿಯಲ್ಟಿ ಮತ್ತು ತೈಲ ಅನಿಲ ಶೇರುಗಳ ವಹಿವಾಟಿನಲ್ಲಿ ಚೇತರಿಕೆಯಾಗಿದ್ದರಿಂದ ಇಂದಿನ ಆರಂಭಿಕ ವಹಿವಾಟಿನಲ್ಲಿ 129.61 ಪಾಯಿಂಟ್‌ಗಳ ಏರಿಕೆ ಕಂಡು 27,803 21 ಅಂಕಗಳಿಗೆ ತಲುಪಿದೆ.
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 32 ಪಾಯಿಂಟ್‌ಗಳ ಏರಿಕೆ ಕಂಡು 8,615.40 ಅಂಕಗಳಿಗೆ ತಲುಪಿದೆ.
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.15 ರಷ್ಟು ಏರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.41 ರಷ್ಟು ಕುಸಿತ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.13 ರಷ್ಟು ಚೇತರಿಕೆ ಕಂಡಿದೆ.
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.22 ಪಾಯಿಂಟ್‌ಗಳ ಏರಿಕೆ ಕಂಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
Rajesh patil
Publish Date: Mon, 17 Oct 2016 (14:03 IST)
Updated Date: Mon, 17 Oct 2016 (14:05 IST)