Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: 215 ಪಾಯಿಂಟ್‌ಗಳ ಏರಿಕೆ ಕಂಡ ಸೂಚ್ಯಂಕ

ಸೆನ್ಸೆಕ್ಸ್: 215 ಪಾಯಿಂಟ್‌ಗಳ ಏರಿಕೆ ಕಂಡ ಸೂಚ್ಯಂಕ
ಮುಂಬೈ , ಗುರುವಾರ, 3 ಸೆಪ್ಟಂಬರ್ 2015 (14:38 IST)
ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 215 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಕಳೆದ ಮೂರು ದಿನಗಳ ವಹಿವಾಟಿನಲ್ಲಿ 937.82 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 215.57 ಪಾಯಿಂಟ್‌ಗಳ ಏರಿಕೆ ಕಂಡು 25,669.13 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 66.05 ಪಾಯಿಂಟ್‌ಗಳ ಏರಿಕೆ ಕಂಡು 7,783.05 ಅಂಕಗಳಿಗೆ ತಲುಪಿದೆ.
 
ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟು ಮತ್ತು ಮೌಲ್ಯಯುತ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಜಪಾನ್‌ನ ನಿಕೈ ಶೇರುಪೇಟೆ ಶೇ.1.42 ರಷ್ಟು ಏರಿಕೆ ಕಂಡಿದೆ. ಚೀನಾ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆಗೆ ಇಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ.
 

Share this Story:

Follow Webdunia kannada