ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸಂವೇದಿ ಸೂಚ್ಯಂಕ

Webdunia
ಬುಧವಾರ, 22 ಜೂನ್ 2016 (13:21 IST)
ವಿದೇಶಿ ಬಂಡವಾಳದ ಒಳಹಿರವು ಹೆಚ್ಚಳದ ಮಧ್ಯೆ ಕೆಲ ಆಯ್ದ ಬ್ಲ್ಯೂ-ಚಿಪ್ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 30 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 54.14 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 30.41 ಪಾಯಿಂಟ್‌ಗಳ ಏರಿಕೆ ಕಂಡು 26,843.19 ಅಂಕಗಳಿಗೆ ತಲುಪಿದೆ. 
 
ರಿಯಲ್ಟಿ, ಗೃಹೋಪಕರಣ ವಸ್ತುಗಳು, ಹೆಲ್ತ್‌ಕೇರ್, ವಿದ್ಯುತ್, ಪಿಎಸ್‌ಯು, ಬಂಡವಾಳ ವಸ್ತುಗಳು ಮತ್ತು ಬ್ಯಾಂಕಿಂಗ್ ಕ್ಷೇತ್ರದ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 5.95 ಪಾಯಿಂಟ್‌ಗಳ ಏರಿಕೆ ಕಂಡು 8,225.85 ಅಂಕಗಳಿಗೆ ತಲುಪಿದೆ. 
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.34 ರಷ್ಟು ಏರಿಕೆ ಕಂಡಿದ್ದರೆ, ಶಾಂಘೈ ಶೇರುಪೇಟೆ ಸೂಚ್ಯಂಕ ಶೇ. 0.49 ರಷ್ಟು ಚೇತರಿಕೆಯಾಗಿದೆ. ಜಪಾನ್‌ನ ಶೇರುಪೇಟೆ ಸೂಚ್ಯಂಕ ಶೇ.1.03 ರಷ್ಟು ಏರಿಕೆಯಾಗಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.14 ರಷ್ಟು ಚೇತರಿಕೆಯೊಂದಿಗೆ ಅಂತ್ಯವಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments