Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ
ಮುಂಬೈ , ಮಂಗಳವಾರ, 16 ಸೆಪ್ಟಂಬರ್ 2014 (14:12 IST)
ಆಯ್ದ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 44 ಪಾಯಿಂಟ್‌ಗಳ ಏರಿಕೆ ಕಂಡಿದೆ. 
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 244.48 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 44.73 ಪಾಯಿಂಟ್‌ಗಳ ಏರಿಕೆ ಕಂಡು 26,861.29 ಅಂಕಗಳಿಗೆ ತಲುಪಿದೆ. 
 
ರಿಯಲ್ಟಿ, ಹೆಲ್ತ್‌ಕೇರ್, ಬಂಡವಾಳ ವಸ್ತುಗಳು, ವಿದ್ಯುತ್, ಮೂಲಸೌಕರ್ಯ ಮತ್ತು ಗೃಹೋಪಕರಣ ವಸ್ತುಗಳ ಕ್ಷೇತ್ರದ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದಾರೆ ಎಂದು ಶೇರುಪೇಟೆ ಮೂಲಗಳು ತಿಳಿಸಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 2.90 ಪಾಯಿಂಟ್‌ಗಳ ಏರಿಕೆಯಾಗಿ 8,044.90 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.33 ರಷ್ಟು ಕುಸಿತ ಕಂಡಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಶೇರುಪೇಟೆಗೆ ರಜೆ ಘೋಷಿಸಲಾಗಿದೆ.

Share this Story:

Follow Webdunia kannada