ಸೆನ್ಸೆಕ್ಸ್: 66 ಪಾಯಿಂಟ್‌ಗಳ ಅಲ್ಪ ಚೇತರಿಕೆ ಕಂಡ ಶೇರುಸೂಚ್ಯಂಕ

Webdunia
ಸೋಮವಾರ, 25 ಜುಲೈ 2016 (13:50 IST)
ಶೇರುಪೇಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ ತೀವ್ರ ತೆರನಾದ ತೊಳಲಾಟ ಕಂಡುಬಂದಿದ್ದು, 66 ಪಾಯಿಂಟ್‌ಗಳ ಅಲ್ಪ ಚೇತರಿಕೆ ಕಂಡಿದೆ.
 
ತೈಲ ಮತ್ತು ಅನಿಲ, ರಿಯಲ್ಟಿ, ಗೃಹೋಪಕರಣ ವಸ್ತುಗಳು, ವಿದ್ಯುತ್, ಇಂಧನ ಮತ್ತು ಉಕ್ಕು ಕ್ಷೇತ್ರಗಳ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ. 
 
ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 66.11 ಪಾಯಿಂಟ್‌ಗಳ ಏರಿಕೆ ಕಂಡು 27,753.96 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 11.15 ಪಾಯಿಂಟ್‌ಗಳ ಏರಿಕೆ ಕಂಡು 8,552.35 ಅಂಕಗಳಿಗೆ ತಲುಪಿದೆ. 
 
ಎಸ್‌ಬಿಐ, ಎಚ್‌ಡಿಎಫ್‌ಸಿ, ಮಾರುತಿ, ಗೇಲ್, ಏಷ್ಯನ್ ಪೇಂಟ್ಸ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದರೆ, ಡಾ.ರೆಡ್ಡಿ, ಎಕ್ಸಿಸ್ ಬ್ಯಾಂಕ್, ಬಜಾಜ್ ಅಟೋ, ಎಚ್‌ಯುಎಲ್ ಮತ್ತು ಭಾರ್ತಿ ಏರ್‌ಟೆಲ್ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.20 ರಷ್ಟು ಚೇತರಿಕೆ ಕಂಡಿದ್ದರೆ ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಕುಸಿತ ಕಂಡಿದೆ. ಆದರೆ, ಶಾಂಘೈ ಶೇರುಪೇಟೆ ಶೇ0.24 ರಷ್ಟು ಏರಿಕೆ ಕಂಡಿದೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments