Webdunia - Bharat's app for daily news and videos

Install App

ಸೆನ್ಸೆಕ್ಸ್: ಸತತ 2ನೇ ದಿನವೂ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

Webdunia
ಮಂಗಳವಾರ, 17 ಮೇ 2016 (19:35 IST)
ಶೇರುಪೇಟೆಯ ಸೂಚ್ಯಂಕ ಸತತ ಎರಡನೇ ದಿನವೂ ವಹಿವಾಟಿನ ಮುಕ್ತಾಯಕ್ಕೆ ಚೇತರಿಕೆ ಕಂಡಿದ್ದು 120 ಪಾಯಿಂಟ್‌ಗಳ ಏರಿಕೆಯಾಗಿದೆ.
 
ಏಷ್ಯಾ ಮತ್ತು ಯುರೋಪ್ ಮಾರುಕಟ್ಟೆಗಳ ಚೇತರಿಕೆಯ ವಹಿವಾಟು ದೇಶಿಯ ಶೇರುಪೇಟೆಯ ಮೇಲೆ ಪ್ರಭಾವ ಬೀರಿದ್ದರಿಂದ ಶೇರುಪೇಟೆ ಸೂಚ್ಯಂಕ ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 120.38 ಪಾಯಿಂಟ್‌ಗಳ ಏರಿಕೆ ಕಂಡು 25,756.14 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 30 ಪಾಯಿಂಟ್‌ಗಳ ಏರಿಕೆಯಾಗಿ 7,890.75 ಅಂಕಗಳಿಗೆ ತಲುಪಿದೆ.
 
ಬಿಪಿಸಿಎಲ್, ಎಚ್‌ಪಿಸಿಎಲ್ ಮತ್ತು ಆಯಿಲ್ ಇಂಡಿಯಾ ಶೇರುಗಳ ಖರೀದಿಗೆ ಹೂಡಿಕೆದಾರರು ಹೆಚ್ಚಿನ ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.
 
ಹಾಂಗ್‌ಕಾಂಗ್, ಜಪಾನ್, ಸಿಂಗಾಪೂರ್, ದಕ್ಷಿಣ ಕೊರಿಯಾ ಮತ್ತು ತೈವಾನ್ ಶೇರುಪೇಟೆಗಳು ವಹಿವಾಟಿನಲ್ಲಿ ಶೇ.1.65 ರಷ್ಟು ಏರಿಕೆ ಕಂಡಿವೆ.
 
ಓಎನ್‌ಜಿಸಿ, ಎಕ್ಸಿಸ್ ಬ್ಯಾಂಕ್, ಎಚ್‌ಡಿಎಫ್‌ಸಿ, ಏಷ್ಯನ್ ಪೇಂಟ್ಸ್, ಮಾರುತಿ, ಗೇಲ್, ಐಸಿಐಸಿಐ ಬ್ಯಾಂಕ್, ಹೀರೋ ಮೋಟಾರ್ ಕಾರ್ಪೋರೇಶನ್, ಟಿಸಿಎಸ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments