Webdunia - Bharat's app for daily news and videos

Install App

ಸೆನ್ಸೆಕ್ಸ್: ಪಾತಾಳಕ್ಕೆ ಕುಸಿದ ಶೇರುಪೇಟೆ ಸಂವೇದಿ ಸೂಚ್ಯಂಕ

Webdunia
ಸೋಮವಾರ, 8 ಫೆಬ್ರವರಿ 2016 (19:00 IST)
ಯುರೋಪ್ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಹೂಡಿಕೆದಾರರು ಶೇರುಗಳ ಮಾರಾಟಕ್ಕೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 330 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 27 ಪೈಸೆ ಕುಸಿತವಾಗಿ 67.91 ರೂಪಾಯಿಗಳಿಗೆ ತಲುಪಿರುವುದು ಕೂಡಾ ಶೇರುಪೇಟೆ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 393.65 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಅಂತ್ಯಕ್ಕೆ 329.55 ಪಾಯಿಂಟ್‌ಗಳ ಕುಸಿತ ಕಂಡು 24,287.42 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಅಂತ್ಯಕ್ಕೆ 101.85 ಪಾಯಿಂಟ್‌ಗಳ ಕುಸಿತ ಕಂಡು 7,387.25 ಅಂಕಗಳಿಗೆ ತಲುಪಿದೆ.
 
ಟಾಟಾ ಮೋಟಾರ್ಸ್, ಐಟಿಸಿ, ಒಎನ್‌ಜಿಸಿ, ಸನ್‌ಫಾರ್ಮಾ, ಟಿಸಿಎಸ್, ವಿಪ್ರೋ, ಎಚ್‌ಡಿಎಫ್‌ಸಿ ಬ್ಯಾಂಕ್, ಇನ್ಫೋಸಿಸ್, ಎಚ್‌ಡಿಎಫ್‌ಸಿ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.
 
ಎಕ್ಸಿಸ್ ಬ್ಯಾಂಕ್, ಎಸ್‌ಬಿಐ, ಭಾರ್ತಿ ಏರ್‌ಟೆಲ್, ಲುಪಿನ್, ಗೇಲ್, ಮಾರುತಿ, ಆದಾನಿ ಪೋರ್ಟ್ಸ್ ಮತ್ತು ಟಾಟಾ ಸ್ಟೀಲ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments