Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: ಅಲ್ಪ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ

ಸೆನ್ಸೆಕ್ಸ್: ಅಲ್ಪ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ
ಮುಂಬೈ , ಶುಕ್ರವಾರ, 29 ಏಪ್ರಿಲ್ 2016 (13:49 IST)
ಹೂಡಿಕೆದಾರರು ಶೇರುಗಳ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 56 ಪಾಯಿಂಟ್‌ಗಳ ಅಲ್ಪ ಕುಸಿತ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 461 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 56 ಪಾಯಿಂಟ್‌ಗಳ ಕುಸಿತ ಕಂಡು 25,547.45 ಅಂಕಗಳಿಗೆ ತಲುಪಿದೆ.
 
ತಂತ್ರಜ್ಞಾನ, ಗೃಹೋಪಕರಣ ವಸ್ತುಗಳು, ಐಟಿ, ವಿದ್ಯುತ್, ವಾಹನೋದ್ಯಮ, ಬ್ಯಾಂಕಿಂಗ್ ಮತ್ತು ಬಂಡವಾಳ ವಸ್ತುಗಳ ಕ್ಷೇತ್ರದ ಶೇರುಗಳ ವಹಿವಾಟನಲ್ಲಿ ಶೇ.0.42 ರಷ್ಟು ನಷ್ಟ ಅನುಭವಿಸಿವೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 15.65 ಪಾಯಿಂಟ್‌ಗಳ ಕುಸಿತ ಕಂಡು 7,831.60 ಅಂಶಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.42 ರಷ್ಟು ಕುಸಿತ ಕಂಡಿದ್ದರೆ, ಶಾಂಘೈ ಶೇರುಪೇಟೆ ಶೇ.0.31 ರಷ್ಟು ಕುಸಿತ ಕಂಡಿದೆ. ಜಪಾನ್ ಶೇರುಪೇಟೆಗೆ ಇಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.1.17 ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

Share this Story:

Follow Webdunia kannada

ಮುಂದಿನ ಸುದ್ದಿ

ಫೇಸ್‌ಬುಕ್‌ ಲಾಗೌಟ್ ಮಾಡಲು ಮರೆತಿದ್ದೀರಾ? ಇಲ್ಲಿದೆ ನೋಡಿ ಪರಿಹಾರ