ಶೇರುಪೇಟೆಯ ಸೂಚ್ಯಂಕ ಸತತ ನಾಲ್ಕನೇ ದಿನವೂ ಚೇತರಿಕೆ ಕಂಡಿದೆ. ಇಂದಿನ ವಹಿವಾಟಿನ ಮುಕ್ತಾಯಕ್ಕೆ 287 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಯುರೋಪ್ ಮತ್ತು ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟು ದೇಶಿಯ ಶೇರುಪೇಟೆಯ ಮೇಲೆ ಧನಾತ್ಮಕ ಪ್ರಭಾವ ಬೀರಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 1136 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ ಮತ್ತೆ 286.92 ಪಾಯಿಂಟ್‌ಗಳ ಏರಿಕೆ ಕಂಡು 26,656.83 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 87 ಪಾಯಿಂಟ್‌ಗಳ ಏರಿಕೆ ಕಂಡು 8,156.65 ಅಂಕಗಳಿಗೆ ತಲುಪಿದೆ.
ಎಚ್‌ಪಿಸಿಎಲ್ , ಐಓಸಿ ಮತ್ತು ರಿಲಯನ್ಸ್ ಇಂಡಸ್ಟ್ರೀಯ್ ಲಿಮಿಟೆಡ್ ಶೇರುಗಳ ವಹಿವಾಟಿನ ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಆದಾನಿ ಪೋರ್ಟ್ಸ್, ರಿಲಯನ್ಸ್ , ಬಜಾಜ್ ಅಟೋ ಮತ್ತು ಎಚ್‌ಡಿಎಫ್‌ಸಿ ಶೇರುಗಳ ಖರೀದಿಗೆ ಹೂಡಿಕೆದಾರರು ಹೆಚ್ಚಿನ ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
\
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.