Webdunia - Bharat's app for daily news and videos

Install App

ಸೆನ್ಸೆಕ್ಸ್: 100 ಪಾಯಿಂಟ್‌ಗಳ ಭರ್ಜರಿ ಚೇತರಿಕೆ ಕಂಡ ಶೇರುಸೂಚ್ಯಂಕ

Webdunia
ಬುಧವಾರ, 13 ಜುಲೈ 2016 (12:18 IST)
ಧನಾತ್ಮಕ ಮ್ಯಾಕ್ರೋಎಕಾನಾಮಿಕ್ ಡೇಟಾ ಫಲಿತಾಂಶದಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 121 ಪಾಯಿಂಟ್‌ಗಳ ಏರಿಕೆ ಕಂಡಿದೆ. 
 
ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟು ಮತ್ತು ಅಮೆರಿಕ ಶೇರುಪೇಟೆಯ ಭರ್ಜರಿ ವಹಿವಾಟಿನಿಂದಾಗಿ ಹೂಡಿಕೆದಾರರು ಶೇರುಗಳು ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 681.24 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 120.62 ಪಾಯಿಂಟ್‌ಗಳ ಏರಿಕೆ ಕಂಡು 27,928.76 ಅಂಕಗಳಿಗೆ ತಲುಪಿದೆ.
 
ಉಕ್ಕು, ತೈಲ ಮತ್ತು ಅನಿಲ, ಪಿಎಸ್‌ಯು ಮತ್ತು ವಿದ್ಯುತ್ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 29.20 ಪಾಯಿಂಟ್‌ಗಳ ಏರಿಕೆ ಕಂಡು 8,550.25 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.1.0 ರಷ್ಟು ಚೇತರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.47 ರಷ್ಟು ಚೇತರಿಕೆ ಕಂಡಿದೆ. ಚೀನಾದ ಶಾಂಘೈ ಶೇರುಪೇಟೆ ಶೇ.0.29 ರಷ್ಟು ಏರಿಕೆ ಕಂಡಿದೆ. 
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.66 ರಷ್ಟು ಏರಿಕೆ ಕಂಡಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments