ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ದೇಶಿಯ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 201 ಪಾಯಿಂಟ್‌ಗಳ ಕುಸಿತ ಕಂಡಿದೆ.
ಕೆಲ ಬ್ಲೂ-ಚಿಪ್ ಶೇರುಗಳ ಖರೀದಿಗೆ ಹೂಡಿಕೆದಾರರು ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಮತ್ತಷ್ಟು ಪಾತಾಳಕ್ಕೆ ಕುಸಿಯವುದನ್ನು ತಡೆಯುವಲ್ಲಿ ಯಶಸ್ವಿಯಾಗಿದೆ.
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 200.88 ಪಾಯಿಂಟ್‌ಗಳ ಇಳಿಕೆ ಕಂಡು 26,314.91 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಜಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 65.85 ಪಾಯಿಂಟ್‌ಗಳ ಏರಿಕೆ ಕಂಡು 8,140.75 ಅಂಕಗಳಿಗೆ ತಲುಪಿದೆ.
ಚೀನಾ, ಹಾಂಗ್‌ಕಾಂಗ್, ದಕ್ಷಿಣ ಕೊರಿಯಾ, ಸಿಂಗಾಪೂರ್ ಮತ್ತು ತೈವಾನ್ ದೇಶಗಳ ಶೇರುಪೇಟೆಗಳು ವಹಿವಾಟಿನ ಮುಕ್ತಾಯಕ್ಕೆ ಶೇ.0.50 ಪಾಯಿಂಟ್‌ಗಳ ಕುಸಿತ ಕಂಡಿವೆ.
ಫಾನ್ಸ್, ಜರ್ಮನಿ ಮತ್ತು ಯುಕೆ ಶೇರುಪೇಟೆಗಳು ಇಂದು ದುರ್ಬಲ ವಹಿವಾಟು ಕಾಣಬೇಕಾಯಿತು ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ