Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: 130 ಪಾಯಿಂಟ್‌ಗಳ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ

ಸೆನ್ಸೆಕ್ಸ್
ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 130 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಕಳೆದ ಎರಡು ದಿನಗಳ ವಹಿವಾಟಿನಲ್ಲಿ 201.45 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ  ಮತ್ತೆ 129.80 ಪಾಯಿಂಟ್‌ಗಳ ಕುಸಿತ ಕಂಡು 25,549.05 ಅಂಕಗಳಿಗೆ ತಲುಪಿದೆ.
 
ಎಫ್‌ಎಂಸಿಜಿ, ಬ್ಯಾಂಕಿಂಗ್, ಹೆಲ್ತ್‌ಕೇರ್, ಬಂಡವಾಳ ವಸ್ತುಗಳು, ವಾಹನೋದ್ಯಮ ಮತ್ತು ತಂತ್ರಜ್ಞಾನ ಶೇರುಗಳ ಮಾರಾಟಕ್ಕೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 32.15 ಪಾಯಿಂಟ್‌ಗಳ ಇಳಿಕೆ ಕಂಡು 7,822.90 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1 ರಷ್ಟು ಇಳಿಕೆ ಕಂಡಿದ್ದರೆ, ಜಪಾನ್‌ನ ನಿಕೈ ಸೂಚ್ಯಂಕ ಶೇ.1.26 ರಷ್ಟು ಇಳಿಕೆಯಾಗಿದೆ. ಶಾಂಘೈ ಶೇರುಪೇಟೆ ಶೇ.0.28 ರಷ್ಟು ಕುಸಿತ ಕಂಡಿದೆ.

ತಾಜಾ ಸುದ್ದಿಗಳನ್ನು ಓದಲು ಡೌನ್‌ಲೋಡ್ ಮಾಡಿಕೊಳ್ಳಿ .

Share this Story:

Follow Webdunia kannada

ಮುಂದಿನ ಸುದ್ದಿ

ದೇವೇಗೌಡರು ಪ್ರಧಾನಿಯಾಗಿದ್ದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿ: ಎಸ್‌.ಎಂ.ಕೃಷ್ಣ