Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: ಪಾತಾಳಕ್ಕೆ ಕುಸಿದ ಶೇರುಪೇಟೆಯ ಸಂವೇದಿ ಸೂಚ್ಯಂಕ

ಸೆನ್ಸೆಕ್ಸ್: ಪಾತಾಳಕ್ಕೆ ಕುಸಿದ ಶೇರುಪೇಟೆಯ ಸಂವೇದಿ ಸೂಚ್ಯಂಕ
ಮುಂಬೈ , ಶುಕ್ರವಾರ, 1 ಆಗಸ್ಟ್ 2014 (13:04 IST)
ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 187 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 192.45 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 187.69 ಪಾಯಿಂಟ್‌ಗಳ ಇಳಿಕೆ ಕಂಡು 25,707.28 ಅಂಕಗಳಿಗೆ ತಲುಪಿದೆ. 
 
ರಿಯಲ್ಟಿ, ಉಕ್ಕು, ವಿದ್ಯುತ್ ಮತ್ತು ಬ್ಯಾಂಕಿಂಗ್ ಕ್ಷೇತ್ರದ ಶೇರುಗಳ ಖರೀದಿಗೆ ಹೂಡಿಕೆದಾರರು ನಿರಾಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ. 
 
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 57.90 ಪಾಯಿಂಟ್‌ಗಳ ಕುಸಿತ ಕಂಡು 7663.40 ಅಂಕಗಳಿಗೆ ತಲುಪಿದೆ.
 

Share this Story:

Follow Webdunia kannada