Select Your Language

Notifications

webdunia
webdunia
webdunia
webdunia

ಜಿಎಸ್‌ಟಿ ತೊಳಲಾಟ: ಮತ್ತೆ ಕುಸಿದ ಶೇರುಪೇಟೆ ಸಂವೇದಿ ಸೂಚ್ಯಂಕ

ಬಿಎಸ್‌ಇ
ರಾಜ್ಯಸಭೆಯಲ್ಲಿ ಜಿಎಸ್‌ಟಿ ಮಸೂದೆ ಅಂಗೀಕಾರವಾಗಿದ್ದರೂ ಜಾರಿಯಾಗುವ ಅನಿಶ್ಚಿತತೆಯಿಂದ ಹೂಡಿಕೆದಾರರು ಶೇರುಗಳ ಖರೀದಿಗೆ ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 60 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಗೃಹೋಪಕರಣ ವಸ್ತುಗಳು, ತೈಲ ಮತ್ತು ಅನಿಲ, ಬ್ಯಾಂಕಿಂಗ್, ಎಫ್‌ಎಂಸಿಜಿ, ತಂತ್ರಜ್ಞಾನ ಮತ್ತು ಐಟಿ ಕ್ಷೇತ್ರಗಳ ಶೇರುಗಳು ಮಾರಾಟಕ್ಕೆ ಹೂಡಿಕೆದಾರರು ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಕಳೆದ ನಾಲ್ಕು ದಿನಗಳ ವಹಿವಾಟಿನಲ್ಲಿ 511.09 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 64.40 ಪಾಯಿಂಟ್‌ಗಳ ಕುಸಿತ ಕಂಡು 27,899.88 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 25.35 ಪಾಯಿಂಟ್‌ಗಳ ಇಳಿಕೆ ಕಂಡು 8,519.50 ಅಂಕಗಳಿಗೆ ತಲುಪಿದೆ.  
 
ಲುಪಿನ್, ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್, ಇನ್ಫೋಸಿಸ್, ಐಟಿಸಿ ಲಿಮಿಟೆಡ್, ಸಿಪ್ಲಾ, ಎಚ್‌ಡಿಎಫ್‌ಸಿ ಲಿಮಿಟೆಡ್, ಭಾರ್ತಿ ಏರ್‌ಟೆಲ್, ಎಸ್‌ಬಿಐ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.62 ರಷ್ಟು ಚೇತರಿಕೆ ಕಂಡಿದ್ದರೆ, ಜಪಾನ್‌ನ ನಿಕೈ ಸೂಚ್ಯಂಕ ಶೇ.0.39 ರಷ್ಟು ಕುಸಿತ ಕಂಡಿದೆ. ಶಾಂಗೈ ಶೇರುಪೇಟೆ ಸೂಚ್ಯಂಕ ಕೂಡಾ ಶೇ.0.36 ರಷ್ಟು ಕುಸಿತ ಕಂಡಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವರ ಕಾರು ಖರೀದಿಗಾಗಿ ಸರಕಾರದಿಂದ ದುಂದುವೆಚ್ಚ