Select Your Language

Notifications

webdunia
webdunia
webdunia
webdunia

ಶುಕ್ರವಾರದಂದು ಶೇರುಪೇಟೆಗೆ ಶುಕ್ರದೆಸೆ: ಸೂಚ್ಯಂಕ ಭರ್ಜರಿ ಚೇತರಿಕೆ

ಸೆನ್ಸೆಕ್ಸ್
ಮುಂಬೈ , ಶುಕ್ರವಾರ, 17 ಜೂನ್ 2016 (12:38 IST)
ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ದೇಶಿಯ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 189 ಪಾಯಿಂಟ್‌ಗಳ ಭರ್ಜರಿ ಚೇತರಿಕೆ ಕಂಡಿದೆ.
 
ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟು ಮತ್ತು ವಿತ್ತಿಯ ಕೊರತೆ ಕುಸಿತದಿಂದಾಗಿ ಶೇರುಪೇಟೆ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 200.88 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 188.80 ಪಾಯಿಂಟ್‌ಗಳ ಕುಸಿತ ಕಂಡು 26,714.26 ಅಂಕಗಳಿಗೆ ತಲುಪಿದೆ.
 
ವಾಹನೋದ್ಯಮ, ಬ್ಯಾಂಕಿಂಗ್, ವಿದ್ಯುತ್, ಬಂಡವಾಳ ವಸ್ತುಗಳು, ಪಿಎಸ್‌ಯು, ತೈಲ ಮತ್ತು ಅನಿಲ, ಹೆಲ್ತ್‌ಕೇರ್, ಉಕ್ಕು, ಎಫ್‌ಎಂಸಿಜಿ, ಐಟಿ ಹಾಗೂ ಗೃಹೋಪಕರಣ ವಸ್ತುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 51.85 ಪಾಯಿಂಟ್‌ಗಳ ಏರಿಕೆ ಕಂಡು 8,192.60 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.1.63 ರಷ್ಟು ಚೇತರಿಕೆ ಕಂಡಿದ್ದರೆ, ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.78 ರಷ್ಟು ಏರಿಕೆ ಕಂಡಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಶೇರುಪೇಟೆ ಶೇ.0.83 ರಷ್ಟು ಚೇತರಿಕೆಯಾಗಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.53 ರಷ್ಟು ಚೇತರಿಕೆ ಕಂಡಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಯೋಗೇಶ್ ಗೌಡ ಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ: ವಿನಯ್ ಕುಲ್ಕರ್ಣಿ