Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ
ಮುಂಬೈ , ಗುರುವಾರ, 14 ಆಗಸ್ಟ್ 2014 (14:15 IST)
ಏಷ್ಯಾ ಮಾರುಕಟ್ಟೆಗಳ ಮಿಶ್ರವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 56 ಪಾಯಿಂಟ್‌ಗಳ ಅಲ್ಪ ಚೇತರಿಕೆ ಕಂಡಿದೆ ಎಂದು ಮೂಲಗಳು ತಿಳಿಸಿವೆ.
 
ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 589.81 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 56.03 ಪಾಯಿಂಟ್‌ಗಳ ಏರಿಕೆಯಾಗಿ 25,974.98 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 3.95 ಪಾಯಿಂಟ್‌ಗಳ ಏರಿಕೆಯಾಗಿ 7743.50 ಅಂಕಗಳಿಗೆ ತಲುಪಿದೆ.
 
ಮಾಹಿತಿ ತಂತ್ರಜ್ಞಾನದ ಶೇರುಗಳು ವಹಿವಾಟಿನಲ್ಲಿ ಶೇ.0.28 ರಷ್ಟು ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
 
 

Share this Story:

Follow Webdunia kannada