Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: 66 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರು ಸೂಚ್ಯಂಕ

ಸೆನ್ಸೆಕ್ಸ್: 66 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರು ಸೂಚ್ಯಂಕ
ಮುಂಬೈ , ಗುರುವಾರ, 1 ಸೆಪ್ಟಂಬರ್ 2016 (11:54 IST)
ದೇಶದ ಆರ್ಥಿಕ ಚೇತರಿಕೆ ಶೇ.7.1 ಕ್ಕೆ ಕುಸಿತ ಕಂಡಿದ್ದರೂ ಹೂಡಿಕೆದಾರರು ಶೇರುಗಳ ಖರೀದಿಗೆ ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 66 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
 
ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 669.92 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 66.36 ಪಾಯಿಂಟ್‌ಗಳ ಕುಸಿತ ಕಂಡು 28,518.53 ಅಂಕಗಳಿಗೆ ತಲುಪಿದೆ. 
 
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 25.55 ಪಾಯಿಂಟ್‌ಗಳ ಏರಿಕೆ ಕಂಡು 8,811.75 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.13 ರಷ್ಟು ಏರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.27 ರಷ್ಟು ಚೇತರಿಕೆ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ,0.16 ರಷ್ಟು ಕುಸಿತ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.29 ರಷ್ಟು ಕುಸಿತ ಕಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ರಾಬರ್ಟ್ ವಾದ್ರಾ ಭೂ ಅಕ್ರಮ ದೃಢಪಡಿಸಿದ ಧಿಂಗ್ರಾ ಆಯೋಗ