ಮೂಲಸೌಕರ್ಯ ಕ್ಷೇತ್ರ ಚೇತರಿಕೆ: ಶೇರುಪೇಟೆ ಸೂಚ್ಯಂಕ ಅಲ್ಪ ಏರಿಕೆ

Webdunia
ಮಂಗಳವಾರ, 2 ಆಗಸ್ಟ್ 2016 (12:03 IST)
ಮೂಲಸೌಕರ್ಯ ಕ್ಷೇತ್ರದ ಚೇತರಿಕೆಯ ವಹಿವಾಟಿನಿಂದಾಗಿ ಪ್ರೇರಣೆಗೊಂಡ ಹೂಡಿಕೆದಾರರು ಶೇರುಗಳು ಖರೀದಿಗೆ ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನಲ್ಲಿ 67 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 205.48 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 66.94 ಪಾಯಿಂಟ್‌ಗಳ ಏರಿಕೆ ಕಂಡು 28,070.06 ಅಂಕಗಳಿಗೆ ತಲುಪಿದೆ.    
 
ಎಫ್‌ಎಂಸಿಜಿ, ಬಂಡವಾಳ ವಸ್ತುಗಳು, ವಾಹನೋದ್ಯಮ, ಹೆಲ್ತ್‌ಕೇರ್ ಮತ್ತು ಬ್ಯಾಂಕಿಂಗ್ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.11 ರಷ್ಟು ಚೇತರಿಕೆ ಕಂಡಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 11,80 ಪಾಯಿಂಟ್‌ಗಳ ಏರಿಕೆ ಕಂಡು 8,648.35 ಅಂಕಗಳಿಗೆ ತಲುಪಿದೆ.  
 
ಮುಂಗಾರು ಅಧಿವೇಶನದಲ್ಲಿ ಜಿಎಸ್‌ಟಿ ಮಸೂದೆ ಅಂಗೀಕಾರ, ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ ಶೇರುಪೇಟೆ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.68 ರಷ್ಟು ಇಳಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ ಶೇರುಪೇಟೆಗೆ ಚಂಡುಮಾರುತದ ಮುನ್ನೆಚ್ಚರಿಕೆಯಿಂದಾಗಿ ಇಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಕೂಡಾ ಶೇ.0.04 ರಷ್ಟು ಕುಸಿತ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ. 0.15 ರಷ್ಟು ಕುಸಿತ ಕಂಡಿದೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಹೈಅಲರ್ಟ್

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಮುಂದಿನ ಸುದ್ದಿ
Show comments