Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: 71 ಪಾಯಿಂಟ್‌ಗಳ ಕುಸಿತ ಕಂಡ ಶೇರುಸೂಚ್ಯಂಕ

ಬಿಎಸ್‌ಇ
ಜಾಗತಿಕ ಮಾರುಕಟ್ಟೆಗಳ ಬೆಳವಣಿಗೆಗಳ ಬಗ್ಗೆ ಹೂಡಿಕೆದಾರರು ಎಚ್ಚರಿಕೆಯ ವಹಿವಾಟಿಗೆ ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 71.49 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 87.79 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 71.49 ಪಾಯಿಂಟ್‌ಗಳ ಏರಿಕೆ ಕಂಡು 28,136.10 ಅಂಕಗಳಿಗೆ ತಲುಪಿದೆ. 
 
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 15.05 ಪಾಯಿಂಟ್‌ಗಳ ಏರಿಕೆ ಕಂಡು  8,657.60 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.21 ರಷ್ಟು ಏರಿಕೆ ಕಂಡಿದ್ದರೆ, ಶಾಂಘೈ ಸೂಚ್ಯಂಕ ಶೇ.0.43 ರಷ್ಟು ಕುಸಿತ ಕಂಡಿದೆ. ಜಪಾನ್‌ನ ನಿಕೈ ಸೂಚ್ಯಂಕ ಶೇ,0.50 ರಷ್ಟು ಏರಿಕೆ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.45 ರಷ್ಟು ಇಳಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರತೀಕಾರ: ಪತ್ನಿ ಸಮ್ಮುಖದಲ್ಲಿ ತಲೆ ಕತ್ತರಿಸಿ ರಸ್ತೆಗೆಸೆದರು