Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: 500 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಸೂಚ್ಯಂಕ

ಸೆನ್ಸೆಕ್ಸ್: 500 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಸೂಚ್ಯಂಕ
ಮುಂಬೈ , ಸೋಮವಾರ, 11 ಜುಲೈ 2016 (17:54 IST)
ಏಷ್ಯಾ ಮಾರುಕಟ್ಟೆಗಳ ಸ್ಥಿರವಹಿವಾಟಿನಿಂದಾಗಿ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 500 ಪಾಯಿಂಟ್‌ಗಳ ಚೇತರಿಕೆ ಕಂಡಿದೆ. 
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 400.79 ಪಾಯಿಂಟ್‌ಗಳ ಚೇತರಿಕೆ ಕಂಡು 27,626.69 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 144.70 ಪಾಯಿಂಟ್‌ಗಳ ಕುಸಿತ ಕಂಡು 8,467.90 ಅಂಕಗಳಿಗೆ ತಲುಪಿದೆ.
 
ಉಕ್ಕು, ವಾಹನೋದ್ಯಮ, ಬ್ಯಾಂಕಿಂಗ್, ಪಿಎಸ್‌ಯು ಮತ್ತು ರಿಯಲ್ಟಿ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ಹಾಂಗ್‌ಕಾಂಗ್‌ ಶೇರುಪೇಟೆ ವಹಿವಾಟಿನ ಮುಕ್ತಾಯಕ್ಕೆ ಶೇ.1.5 ರಷ್ಟು ಚೇತರಿಕೆ ಕಂಡಿದ್ದರೆ, ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.2 ರಷ್ಟು ಏರಿಕೆ ಕಂಡಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಐಡಿ ತನಿಖೆಯಲ್ಲಿ ಸರಕಾರದ ಹಸ್ತಕ್ಷೇಪವಿಲ್ಲ: ಜಿ.ಪರಮೇಶ್ವರ್