Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: ಪಾತಾಳಕ್ಕೆ ಕುಸಿತ ಶೇರುಪೇಟೆ ಸಂವೇದಿ ಸೂಚ್ಯಂಕ

ಸೆನ್ಸೆಕ್ಸ್: ಪಾತಾಳಕ್ಕೆ ಕುಸಿತ ಶೇರುಪೇಟೆ ಸಂವೇದಿ ಸೂಚ್ಯಂಕ
ಮುಂಬೈ , ಸೋಮವಾರ, 29 ಜೂನ್ 2015 (12:34 IST)
ಹೂಡಿಕೆದಾರರು ಶೇರುಗಳ ಮಾರಾಟದಲ್ಲಿ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 535 ಪಾಯಿಂಟ್‌ಗಳ ಕುಸಿತ ಕಂಡಿದೆ. 
 
ಕಳೆದ ವಾರ ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟು ದೇಶಿಯ ಶೇರುಪೇಟೆಯ. ಮೇಲೆ ಪ್ರಭಾವ ಬೀರಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 84.13 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‍ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 535.87 ಪಾಯಿಂಟ್‌ಗಳ ಏರಿಕೆ ಕಂಡು 27,275.97 ಅಂಕಗಳಿಗೆ ತಲುಪಿದೆ.
 
ರಿಯಲ್ಟಿ, ಬಂಡವಾಳ ವಸ್ತುಗಳು ಮತ್ತು ಬ್ಯಾಂಕಿಂಗ್ ಶೇರುಗಳು ಇಂದಿನ ವಹಿವಾಟಿನಲ್ಲಿ ನಷ್ಟ ಅನುಭವಿಸಿವೆ.
 
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 166.45 ಪಾಯಿಂಟ್‌ಗಳ ಇಳಿಕೆ ಕಂಡು 8214.65 ಅಂಕಗಳಿಗೆ ತಲುಪಿದೆ.
 
ಏಷ್ಯಾದ ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಶೇರುಪೇಟೆ ಶೇ.1.41 ರಷ್ಟು ಕುಸಿತ ಕಂಡಿದ್ದರೆ ಜಪಾನ್‌ನ ನಿಕೈ ಸೂಚ್ಯಂಕ ಶೇ.1.78 ರಷ್ಟು ಇಳಿಕೆಯಾಗಿದೆ ಎಂದು ಶೇರುಪೇಟೆಯ ಡೀಲರ್‌ಗಳು ತಿಳಿಸಿದ್ದಾರೆ.
 

Share this Story:

Follow Webdunia kannada