Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ
ಮುಂಬೈ , ಸೋಮವಾರ, 21 ಏಪ್ರಿಲ್ 2014 (11:00 IST)
ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ 
 
ವಹಿವಾಟಿನಲ್ಲಿ 76 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಚಿಲ್ಲರೆ ಹೂಡಿಕೆದಾರರು, ಉಕ್ಕು, ವಿದ್ಯುತ್ , ಸಾರ್ವಜನಿಕ ಕ್ಷೇತ್ರದ ಕಂಪೆನಿಗಳು, ಬಂಡವಾಳ ವಸ್ತುಗಳು, ಬ್ಯಾಂಕಿಂಗ್ 
 
ಮತ್ತು ತೈಲ ಹಾಗೂ ಅನಿಲ ಕ್ಷೇತ್ರದ ಶೇರುಗಳು ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ 
 
ಡೀಲರ್‌ಗಳು ತಿಳಿಸಿದ್ದಾರೆ. 
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 351.61 ಪಾಯಿಂಟ್‌ಗಳ ಏರಿಕೆಯೊಂದಿಗೆ ಅಂತ್ಯವಾಗಿದ್ದ ಬಿಎಸ್‌ಇ ಸೂಚ್ಯಂಕ 
 
ಇಂದಿನ ಆರಂಭಿಕ ವಹಿವಾಟಿನಲ್ಲಿ 76.30 ಪಾಯಿಂಟ್‌ಗಳ ಏರಿಕೆ ಕಂಡು 22,705.14 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 26.10 ಪಾಯಿಂಟ್‌ಗಳ ಏರಿಕೆ ಕಂಡು 
 
6805.50 ಅಂಕಗಳಿಗೆ ತಲುಪಿದೆ. 
 
ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.63 ರಷ್ಟು ಏರಿಕೆ ಕಂಡಿದೆ. 
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆಗೆ ಇಂದು ರಜೆ ಘೋಷಿಸಲಾಗಿದೆ. 
 
 
 

Share this Story:

Follow Webdunia kannada