Webdunia - Bharat's app for daily news and videos

Install App

ಲಂಕಾ ದಹನ ಮಾಡಿದ ಭಾರತ ಸೆಮಿಗೆ ಲಗ್ಗೆ

Webdunia
ಗುರುವಾರ, 8 ಡಿಸೆಂಬರ್ 2011 (12:04 IST)
PTI


ಪ್ರತಿಷ್ಠಿತ ಸ್ಯಾಫ್ ಕಪ್ ಫುಟ್ಬಾಲ್ ಚಾಂಪಿಯನ್‌ನ ಮಹತ್ವದ ಪಂದ್ಯದಲ್ಲಿ ನೆರೆಯ ಶ್ರೀಲಂಕಾ ತಂಡವನ್ನು 3-0 ಅಂತರದಲ್ಲಿ ಸದೆಬಡಿದಿರುವ ಆತಿಥೇಯ ಭಾರತ ತಂಡವು ಸೆಮಿಫೈನಲ್‌ಗೆ ಪ್ರವೇಶಿಸಿದೆ.

ಜವಾಹರ್‌ಲಾಲ್ ನೆಹರು ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಕನಿಷ್ಠ ಡ್ರಾ ದಾಖಲಿಸಿದರೂ ಭಾರತದ ಅಂತಿಮ ನಾಲ್ಕರ ಘಟ್ಟದ ಹೋರಾಟ ಸುಲಭವಾಗುತ್ತಿತ್ತು. ಆದರೆ ಭೂತಾನ್ ವಿರುದ್ಧ 5-0 ಗೆಲುವಿನ ಹುಮ್ಮಸ್ಸಿನಲ್ಲಿದ್ದ ಭಾರತೀಯ ಪಡೆಯು ಮತ್ತದೇ ಶ್ರೇಷ್ಠ ಪ್ರದರ್ಶನವನ್ನು ಮುಂದುವರಿಸಿತ್ತು.

ಪಂದ್ಯದ ಮೊದಲಾರ್ಧದಲ್ಲಿ ಸಮಬಲದ ಹೋರಾಟ ನೀಡಿದ ಇತ್ತಂಡಗಳಿಂದ ಯಾವುದೇ ಗೋಲು ದಾಖಲಾಗಲಿರಲಿಲ್ಲ. ಆದರೆ 71ನೇ ನಿಮಿಷದಲ್ಲಿ ರಾಜಶೇಖ್ ಹಾಗೂ 80 ಹಾಗೂ 84ನೇ ನಿಮಿಷಗಳಲ್ಲಿ ಸ್ಟೀವನ್ ದಾಸ್ ಮತ್ತು ಸುಶಿಲ್ ಕುಮಾರ್ ಸಿಂಗ್ ಗೋಲು ಬಾರಿಸಿ ಗೆಲುವಿನ ಅಂತರವನ್ನು ಮತ್ತಷ್ಟು ಹಿಗ್ಗಿಸಿದರು.

ಭಾರತ ಇದೀಗ ನಡೆಯಲಿರುವ ಫೈನಲ್‌ಗಾಗಿನ ಹಣಾಹಣಿಯಲ್ಲಿ ಮಾಲ್ಡೀವ್ಸ್ ತಂಡವನ್ನು ಎದುರಿಸಲಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments