Webdunia - Bharat's app for daily news and videos

Install App

ಸಮರೋಪಾದಿಯಲ್ಲಿ ಸಿಡಬ್ಲೂಜಿ ಸಿದ್ಧತೆ:ಪ್ರಧಾನಿ ಆದೇಶ

Webdunia
ಶುಕ್ರವಾರ, 24 ಸೆಪ್ಟಂಬರ್ 2010 (12:53 IST)
ಕಾಮನ್‌ವೆಲ್ತ್ ಕ್ರೀಡಾಗ್ರಾಮದ ಕಾಮಗಾರಿಗಳ ಕುರಿತಂತೆ ಪರಿಷ್ಕರಣ ಸಭೆ ನಡೆಸಿದ ಪ್ರಧಾನಿ ಡಾ.ಮನಮೋಹನ್ ಸಿಂಗ್, ಸಮರೋಪಾದಿಯಲ್ಲಿ ಕಾಮಗಾರಿಗಳನ್ನು ಮುಕ್ತಾಯಗೊಳಿಸುವಂತೆ ಸಂಬಧಿತ ಸಚಿವರಿಗೆ ಆದೇಶಿಸಿದ್ದಾರೆ ಎಂದು ಸರಕಾರಿ ಮೂಲಗಳು ತಿಳಿಸಿವೆ.

ಪ್ರಧಾನಿ ಮನಮೋಹನ್ ಸಿಂಗ್, ನಗರಾಭಿವೃದ್ಧಿ ಸಚಿವ ಎಸ್.ಜೈಪಾಲ್ ರೆಡ್ಡಿ, ಕ್ರೀಡಾ ಸಚಿವ ಎಂ.ಎಸ್.ಗಿಲ್, ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್, ದೆಹಲಿ ರಾಜ್ಯಪಾಲ ತೇಜಿಂದರ್ ಖನ್ನಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್ ಮತ್ತು ಸಂಪುಟ ಕಾರ್ಯದರ್ಶಿ ಕೆ.ಎಂ.ಚಂದ್ರಶೇಖರ್ ಅವರೊಂದಿಗೆ ನಡೆಸಿದ ಸುಮಾರು ಎರಡು ಗಂಟೆಗಳ ಸಭೆಯಲ್ಲಿ,ವೇಗವಾಗಿ ಕಾಮಗಾರಿಗಳನ್ನು ಮುಕ್ತಾಯಗೊಳಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಕಾಮನ್‌ವೆಲ್ತ್ ಆಯೋಜಕ ಸಮಿತಿ ಅಧ್ಯಕ್ಷ ಸುರೇಶ್ ಕಲ್ಮಾಡಿ ಸಭೆಯಲ್ಲಿ ಉಪಸ್ಥಿತರಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಸರಕಾರಿ ಮೂಲಗಳ ಪ್ರಕಾರ, ಅಕ್ಟೋಬರ್ 3-14ರವರೆಗೆ ನಡೆಯಲಿರುವ ಕಾಮನ್‌ವೆಲ್ತ್ ಪಂದ್ಯಾವಳಿಗಾಗಿ ಭರದ ಸಿದ್ಧತೆ ನಡೆಸುವಂತೆ ನಿರ್ದೇಶಿಸಿದ್ದಾರೆ.ಶುಕ್ರವಾರದವರೆಗೆ ಕ್ರೀಡಾಗ್ರಾಮ ಸಂಪೂರ್ಣವಾಗಿ ಸಿದ್ಧವಾಗಲಿದೆ ಎಂದು ಸಚಿವರುಗಳು ಪ್ರದಾನಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments