Webdunia - Bharat's app for daily news and videos

Install App

ಹಾಕಿ: ಕೋಚ್ ನೊಬ್ಸ್ ಹೇಳಿಕೆಯಿಂದ ಆಟಗಾರರಿಗೆ ನಿರುತ್ಸಾಹ

Webdunia
ಗುರುವಾರ, 29 ಸೆಪ್ಟಂಬರ್ 2011 (10:01 IST)
ಲಂಡನ್ ಒಲಿಂಪಿಕ್ಸ್ ಪಂದ್ಯಾವಳಿ ಮುಂದಿರುವಂತೆ ತಂಡದ ಆಟಗಾರರ ಮನೋಸ್ತೈರ್ಯವನ್ನು ಕುಂದಿಸುವ ಭಾರತೀಯ ಹಾಕಿ ತಂಡದ ಆಸ್ಟ್ರೇಲಿಯಾ ಕೋಚ್ ಮಿಚೈಲ್ ನೊಬ್ಸ್‌ ವಿರುದ್ಧ ಮಾಜಿ ಕೋಚ್ ರಾಜೀಂದರ್ ಸಿಂಗ್ ಟೀಕಿಸಿದ್ದಾರೆ.

ಲಂಡನ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವುದು ತುಂಬಾ ಕಷ್ಟ ಎಂದು ಕೋಚ್ ನೊಬ್ಸ್ ಹೇಳಿಕೆ ನೀಡಿ ತಂಡದ ಆಟಗಾರರ ಉತ್ಸಾಹವನ್ನು ಕುಗ್ಗಿಸುವುದು ಸರಿಯಲ್ಲ. ಇದರಿಂದ, ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ಸಿದ್ಥತೆಗೆ ಅಡ್ಡಿಯಾಗುತ್ತದೆ. ತಮ್ಮದೇ ತಂಡದ ವಿರುದ್ಧ ಟೀಕಿಸುವುದು ಹೇಯ ಕೃತ್ಯ ಎಂದು ಕಿಡಿಕಾರಿದ್ದಾರೆ.

ರಾಷ್ಟ್ರೀಯ ಹಾಕಿ ತಂಡದ ಕೋಚ್ ಮಿಚೈಲ್ ನೊಬ್ಸ್ ಇಂತಹ ಹೇಳಿಕೆಗಳನ್ನು ನೀಡಬಾರದು. ಕ್ರೀಡಾ ಸಚಿವಾಲಯ ಕೋಚ್ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಲಂಡನ್ ಒಲಿಂಪಿಕ್ಸ್‌‌ಗೆ ಅರ್ಹತೆ ಪಡೆಯುವುದು ತುಂಬಾ ಕಷ್ಟ ಎನ್ನುವದು ಗೊತ್ತಿದೆ. ಆದರೆ, ತಂಡವನ್ನು ಯಶಸ್ವಿನತ್ತ ಸಾಗಿಸುವುದು ಕೋಚ್ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಹಾಕಿ ತಂಡದ ಕೋಚ್ ಆಗಿ ನೊಬ್ಸ್ ಅಧಿಕಾರ ಸ್ವೀಕರಿಸುತ್ತಿದ್ದಂತೆ, ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಜಯಭೇರಿ ಬಾರಿಸಿದ್ದರು. ಲಂಡನ್ ಒಲಿಂಪಿಕ್ಸ್ ಪಂದ್ಯಾವಳಿಯಲ್ಲಿ ಅರ್ಹತೆ ಪಡೆಯಲು ಭಾರತ ತಂಡ ತುಂಬಾ ದೂರ ಸಾಗಬೇಕಾಗುತ್ತದೆ ಎಂದು ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments