Webdunia - Bharat's app for daily news and videos

Install App

3ನೇ ಟೆಸ್ಟ್: ಭಾರತ 78ಕ್ಕೆ ಆಲೌಟ್!

Webdunia
ಬುಧವಾರ, 25 ಆಗಸ್ಟ್ 2021 (19:35 IST)

ಎರಡನೇ ಸೋಲಿನಿಂದ ಕಂಗೆಟ್ಟಿದ್ದ ಇಂಗ್ಲೆಂಡ್ ಬೌಲರ್ ಗಳು ನೀಡಿದ ತಿರುಗೇಟಿಗೆ ತತ್ತರಿಸಿದ ಭಾರತ ತಂಡ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 78 ರನ್ ಗಳ ಕಳಪೆ ಮೊತ್ತಕ್ಕೆ

ಆಲೌಟಾಗಿದೆ.

ಲೀಡ್ಸ್ ಮೈದಾನದಲ್ಲಿ ಬುಧವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ಭಾರತ ತಂಡ ಆರಂಭದಿಂದಲೇ ಸತತವಾಗಿ ವಿಕೆಟ್ ಕಳೆದುಕೊಂಡು ಕಳಪೆ ಮೊತ್ತಕ್ಕೆ ಪತನಗೊಂಡಿತು.

ಭಾರತದ ಪರ ರೋಹಿತ್ ಶರ್ಮ ಮತ್ತು ಅಜಿಂಕ್ಯ ರಹಾನೆ ಎರಡಂಕಿ ದಾಟಿದ ಸಾಧನೆ ಮಾಡಿದರು. ಅದರಲ್ಲೂ ಹೊಡಿಬಡಿ ಆಟಕ್ಕೆ ಹೆಸರಾದ ರೋಹಿತ್ ಶರ್ಮ ವೃತ್ತಿಜೀವನದಲ್ಲೇ ಮೊದಲ ಬಾರಿ ನಿಧಾನಗತಿ ಆಟವಾಡಿದರೂ ದೊಡ್ಡ ಮೊತ್ತ ಪೇರಿಸಲು ವಿಫಲರಾದರು.

ರೋಹಿತ್ ಶರ್ಮ 105 ಎಸೆತಗಳನ್ನು ಎದುರಿಸಿ ಕೇವಲ ಒಂದು ಬೌಂಡರಿ ನೆರವಿನೊಂದಿಗೆ 19 ರನ್ ಗಳಿಸಿದರೆ, ಅಜಿಂಕ್ಯ ರಹಾನೆ 54 ಎಸೆತಗಳಲ್ಲಿ 3 ಬೌಂಡರಿ ಸಹಾಯದಿಂದ 18 ರನ್ ಗಳಿಸಿ ಔಟಾದರು.

ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್ 3 ವಿಕೆಟ್ ಪಡೆದರೆ, ಓಲಿ ರಾಬಿನ್ಸನ್, ಸ್ಯಾಮ್ ಕುರಿಯನ್ ಮತ್ತು ಕ್ರೇಗ್ ಓವರ್ಟನ್ ತಲಾ 2 ವಿಕೆಟ್ ಗಳಿಸಿದರು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments