ಪಾಕಿಸ್ತಾನದ ಮರಳಲ್ಲಿ ಮೂಡಿದ ಕೊಹ್ಲಿ ಚಿತ್ರ

Webdunia
ಭಾನುವಾರ, 30 ಅಕ್ಟೋಬರ್ 2022 (17:05 IST)
ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ವದಾದ್ಯಂತ ಅಭಿಮಾನಿಗಳು ಇರುವುದು ಗೊತ್ತೇ ಇದೆ. ಅದರಲ್ಲೂ ಟೀಮ್ ಇಂಡಿಯಾದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದಲ್ಲೂ ಕಿಂಗ್ ಕೊಹ್ಲಿಯನ್ನು ಪ್ರೀತಿಸುವವರು ಇದ್ದಾರೆ. ಇದಕ್ಕೆ ಸಾಕ್ಷಿಯಾಗಿ ಹಲವು ಬಾರಿ ವಿರಾಟ್ ಕೊಹ್ಲಿಯ ಫೋಟೋಗಳು ಪಾಕಿಸ್ತಾನದ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾರಾಜಿಸಿದೆ. ಇದೀಗ ಮತ್ತೊಮ್ಮೆ ಕಿಂಗ್ ಕೊಹ್ಲಿ ಚಿತ್ರವೊಂದು ಮೂಡಿಬಂದಿದೆ. ಆದರೆ ಈ ಬಾರಿ ಮರಳಿನ ಮೇಲೆ ಎಂಬುದು ವಿಶೇಷ. ಪಾಕಿಸ್ತಾನ್ ಪ್ರಾಂತ್ಯದ ವಿರಾಟ್ ಕೊಹ್ಲಿಯ ಅಭಿಮಾನಿಯೊಬ್ಬರು ಸುಂದರ ಚಿತ್ರವೊಂದನ್ನು ಮರಳಿನಲ್ಲಿ ಚಿತ್ರಿಸಿದ್ದಾರೆ. ಕಡಲ ಕಿನಾರೆಯಲ್ಲಿ ಮೂಡಿಬಂದಿರುವ ಈ ಚಿತ್ರವನ್ನು ಚಿತ್ರಿಸಿರುವುದು ಬಲೂಚಿಸ್ತಾನದ ರೇಖಾಚಿತ್ರಕಾರ ಸಮೀರ್ ಶೌಕತ್ ಮತ್ತು ಗೆಳೆಯರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಿಂಗ್ ಕೊಹ್ಲಿ ಅಭಿಮಾನಿಗಳಿಂದ ಬಲುಚಿಸ್ತಾನದ ಫ್ಯಾನ್ಸ್​ಗಳ ಅಭಿಮಾನಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments